January 20, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತುಂಬೆ ದೇವಸ್ಥಾನ ಕಳವು ಪ್ರಕರಣ ಬೇಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು

ಮೂವರು ಕುಖ್ಯಾತ ಕಳ್ಳರ ಬಂಧನ – ಲಕ್ಷಾಂತರ ಮೌಲ್ಯದ ಆಭರಣ, ಕಾರು ವಶಕ್ಕೆ

ಬಂಟ್ವಾಳ : ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುವ ಬಂಟ್ವಾಳ ಗ್ರಾಮಾಂತರ ಪೊಲೀಸರು ಮೂವರು ಕುಖ್ಯಾತ ಕಳ್ಳರನ್ನು ಬಂಧಿಸಿ ಕಳವುಗೈದ ಸೊತ್ತು ಹಾಗೂ ಕಾರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆ, ಚೆರ್ವತ್ತೂರು ಗ್ರಾಮದ ಕೋತಂಕರ – ಪಿಲಾವಲಪ್ಪು ನಿವಾಸಿ 44 ವರ್ಷ ಪ್ರಾಯದ ಬಶೀರ್ ಕೆ.ಪಿ. ಯಾನೆ ಆಕ್ರಿ ಬಶೀರ್, ಕೊಲ್ಲಂ ಜಿಲ್ಲೆಯ ಕುರುನಾಗಪಲ್ಲಿ ತಾಲೂಕಿನ ಆಲಪ್ಪಾಡ್ ಗ್ರಾಮದ ನಿವಾಸಿ 46 ವರ್ಷ ಪ್ರಾಯದ ಪ್ರಕಾಶ್ ಬಾಬು ಯಾನೆ ಮಹಮ್ಮದ್ ನಿಯಾಝ್ ಹಾಗೂ ಬಂಟ್ವಾಳ ತಾಲೂಕು, ಪುದು ಗ್ರಾಮದ ನಿವಾಸಿ 53 ವರ್ಷ ಪ್ರಾಯದ ಎಫ್.ಜೆ. ಮಹಮ್ಮದ್ ಇಸ್ಮಾಯಿಲ್ ಎಂದು ಹೆಸರಿಸಲಾಗಿದೆ.

ಆರೋಪಿಗಳು ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವೆಂಬರ್ 4ರಂದು ರಾತ್ರಿ ಬೆಳ್ಳಿಯ ಆಭರಣಗಳನ್ನು ಹಾಗೂ ನಗದನ್ನು ಕಳವುಗೈದು ಪರಾರಿಯಾಗಿದ್ದರು. ಈ ಬಗ್ಗೆ ಕಾರ್ಯಾಚರಣೆ ನಡೆಸಿದ ಜಿಲ್ಲಾ ಪೊಲೀಸರ ವಿಶೇಷ ತನಿಖಾ ತಂಡ ಬಂಟ್ವಾಳ ತಾಲೂಕಿನ ಇರಾ ಎಂಬಲ್ಲಿ ಮೂರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 1.25 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿಯ ಆಭರಣಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಕಾರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ಪೈಕಿ ಬಶೀರ್ ಕೆ.ಪಿ. ಎಂಬಾತ ಕುಖ್ಯಾತ ಕಳ್ಳನಾಗಿದ್ದು, ಈತನ ವಿರುದ್ದ ಬೇರೆ ಬೇರೆ ಠಾಣೆಗಳಲ್ಲಿ ಸುಮಾರು 13 ಕಳ್ಳತನ ಪ್ರಕರಣಗಳು ದಾಖಲಾಗಿವೆ. ಆರೋಪಿ ಪ್ರಕಾಶ್ ಬಾಬು ಯಾನೆ ಮಹಮ್ಮದ್ ನಿಯಾಝ್ ಎಂಬಾತನ ವಿರುದ್ದ 3 ಕಳ್ಳತನ ಪ್ರಕರಣಗಳು ದಾಖಲಾಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಂಧನ ಕಾರ್ಯಾಚರಣೆಯು ಜಿಲ್ಲಾ ಎಸ್ಪಿ ಯತೀಶ್ ಎನ್. ಹಾಗೂ ಎಡಿಶನಲ್ ಎಸ್ಪಿ ರಾಜೇಂದ್ರ ಡಿ.ಎಸ್. ಅವರ ಮಾರ್ಗದರ್ಶನದಲ್ಲಿ, ಬಂಟ್ವಾಳ ಡಿವೈಎಸ್ಪಿ ಎಸ್. ವಿಜಯಪ್ರಸಾದ್ ಅವರ ನೇತೃತ್ವದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ ಬಿ. ಮತ್ತು ಪೂಂಜಾಲಕಟ್ಟೆ ಠಾಣಾಧಿಕಾರಿ ನಂದಕುಮಾರ್, ಬಂಟ್ವಾಳ ಗ್ರಾಮಾಂತರ ಠಾಣಾಧಿಕಾರಿ  ಹರೀಶ್ ಎಂ.ಆರ್., ಲೋಲಾಕ್ಷ ಹಾಗೂ ಸಿಬ್ಬಂದಿಗಳಾದ ಉದಯ ರೈ, ಪ್ರವೀಣ್ ಎಂ., ಅದ್ರಾಮ, ಹರಿಶ್ಚಂದ್ರ, ನಝೀರ್, ಕೃಷ್ಣ ನಾಯ್ಕ್, ಸಂತೋಷ್, ರಾಹುಲ್ ರಾವ್, ಅಶೋಕ್, ವಿವೇಕ್ ಕೆ.,  ಕುಮಾರ್ ಎಚ್.ಕೆ., ಬಸವರಾಜ್, ರಂಜಾನ್, ಕುಮಾರ, ಮಹಾಂತೇಶ್ ಮತ್ತು ಜಿಲ್ಲಾ ಗಣಕಯಂತ್ರ ವಿಭಾಗದ ಸಂಪತ್, ದಿವಾಕರ ಅವರುಗಳ ತಂಡ ನಡೆಸಿದೆ.

You may also like

News

ಕನ್ನಡ ಭವನ ಜಿಲ್ಲಾಧ್ಯಕ್ಷರಾಗಿ ಎಸ್. ನಂಜುಂಡಯ್ಯ ಚಾಮರಾಜನಗರ ಆಯ್ಕೆ

ಕಾಸರಗೋಡು : ಸಂಘಟಕ, ಸಾಹಿತಿ ಶಿಕ್ಷಕ, ಸಾಹಿತ್ಯ ಪರಿಷತ್, ಜಾನಪದ ಪರಿಷತ್ ಮೊದಲಾಗಿ ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯ ಹೆಚ್ಚಿನ ಸಂಘ, ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸಕ್ರಿಯರಾಗಿರುವ ಎಸ್.
News

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ

You cannot copy content of this page