July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

“ಮಂಜೂಷಾ” ವಸ್ತು ಸಂಗ್ರಹಾಲಯ – ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಿಂದ ಮಾನ್ಯತೆ

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ರೂಪಿಸಿದ ಅಪೂರ್ವ “ಮಂಜೂಷಾ” ವಸ್ತು ಸಂಗ್ರಹಾಲಯ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಿಂದ ವಿಶೇಷ  ಮಾನ್ಯತೆಗೆ ಪಾತ್ರವಾಗಿದೆ.

ನವದೆಹಲಿಯಲ್ಲಿರುವ ಸಂಸ್ಥೆಯ ಮುಖ್ಯಸ್ಥ ಡಾ. ಅನಿಲ್ ಕುಮಾರ್ ಶರ್ಮ ಹೆಗ್ಗಡೆಯವರ 76ನೇ ಜನ್ಮದಿನಾಚರಣೆ ಶುಭ ಸಂದರ್ಭದಲ್ಲಿ ಕಾರ್ತಿಕ ಸೋಮವಾರ ಶುಭದಿನ ಹೆಗ್ಗಡೆಯವರಿಗೆ ಗೌರವಪೂರ್ವಕವಾಗಿ ಅಭಿನಂದನೆಗಳೊಂದಿಗೆ ಪ್ರಮಾಣಪತ್ರವನ್ನು ಸಮರ್ಪಿಸಿದರು. ಒಬ್ಬನೆ ವ್ಯಕ್ತಿ ಕಳೆದ 50 ವರ್ಷಗಳಲ್ಲಿ ನಮ್ಮ ಭವ್ಯ ಇತಿಹಾಸ, ಕಲೆ ಹಾಗೂ ಸಂಸ್ಕೃತಿಗೆ ಅಪೂರ್ವ ಪ್ರಾಚೀನ ಕಲಾತ್ಮಕ ವಸ್ತುಗಳನ್ನು ಸಂಗ್ರಹಿಸಿ, ಸಂರಕ್ಷಿಸಿ ಸಾರ್ವಜನಿಕರ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಿರುವುದು ವಿಶಿಷ್ಠ ಸೇವೆಯಾಗಿದೆ ಎಂದು ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಗಿದೆ.

7500 ತಾಳೆಗರಿ ಹಸ್ತಪ್ರತಿಗಳು, 21,000 ಕಲಾತ್ಮಕ ವಸ್ತುಗಳು, 25,000 ಅಪೂರ್ವ ಪ್ರಾಚೀನ ಗ್ರಂಥಗಳು ಹಾಗೂ ನೂರಕ್ಕೂ ಮಿಕ್ಕಿ ವಿಂಟೇಜ್ ಕಾರುಗಳ ಸಂಗ್ರಹದ ಬಗ್ಯೆ ಹೆಗ್ಗಡೆಯವರನ್ನು ಶ್ಲಾಘಿಸಿ ಅಭಿನಂದಿಸಿದ್ದಾರೆ.

You may also like

News

41 ಬಾರಿ ವಾರೆಂಟ್ ಜಾರಿಯಾಗಿದ್ದ ಖತರ್ನಾಕ್ ಆರೋಪಿ ನೆಲ್ಸನ್ ಕೊನೆಗೂ ಪುತ್ತೂರು ಪೊಲೀಸರ ವಶಕ್ಕೆ!

ಕಳೆದ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ಬರೋಬ್ಬರಿ 41 ಬಾರಿ ದಸ್ತಗಿರಿ ವಾರೆಂಟ್ ಆದೇಶವಾಗಿದ್ದ ದರೋಡೆ ಪ್ರಕರಣದ ಪ್ರಮುಖ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಕೇರಳದಲ್ಲಿ
News

SJEC’s Nikhil A. Poojary to Represent India at International Yoga Championship

Saint Joseph Engineering College (SJEC) Vamanjoor has added another feather to its cap with the outstanding achievement of Nikhil A.

You cannot copy content of this page