ಕರ್ನಾಟಕ ಘನ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಿಂದ ಬಡ ಜನರ ಬದುಕು ಹಸನಾಗಿದೆ – ಮಾಜಿ ಸಚಿವ ಬಿ. ರಮಾನಾಥ ರೈ

ಬಂಟ್ವಾಳ : ಕರ್ನಾಟಕ ಘನ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಿಂದ ಬಡ ಜನರ ಬದುಕು ಹಸನಾಗಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಬಂಟ್ವಾಳ ತಾಲೂಕು ವತಿಯಿಂದ ಮಾಣಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಅನಂತಾಡಿ, ಪೆರಾಜೆ, ನೆಟ್ಲಮೂಡ್ನೂರು, ಮಾಣಿ, ಕಡೇಶಿವಾಲಯ, ಕೆದಿಲ, ಪೆರ್ನೆ ಗ್ರಾಮಗಳನ್ನೊಳಗೊಂಡು ಗ್ಯಾರಂಟಿ ಯೋಜನೆಗಳ ನೋಂದಾವಣೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಭಾರತ ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ದೇಶದ ಆರ್ಥಿಕ ಸಬಲೀಕರಣಕ್ಕಾಗಿ ಸಮಗ್ರ ಬದಲಾವಣೆಯನ್ನು ಮಾಡಿ ವಿಶ್ವವೇ ಗುರುತಿಸುವಂತಾಗಿತ್ತು. ಈಗ ಕರ್ನಾಟಕದಲ್ಲಿ ಸನ್ಮಾನ್ಯ ಸಿದ್ದರಾಮಯ್ಯರವರು ಹಲವು ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಮೂಲಕ ಜನಸಾಮಾನ್ಯರ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಹೇಳಿದರು.
ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಬಂಟ್ವಾಳ ತಾಲೂಕು ಅಧ್ಯಕ್ಷೆ ಜಯಂತಿ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ನಾರಾಯಣ ನಾಯ್ಕ್, ಪುತ್ತೂರು ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ, ಅನುಷ್ಟಾನ ಸಮಿತಿ ಬಂಟ್ವಾಳ ತಾಲೂಕು ಸದಸ್ಯರಾದ ಮಹಮ್ಮದ್ ಸಿರಾಜ್, ಐಡಾ ಸುರೇಶ್, ಕಾಂಚಲಾಕ್ಷಿ, ಸತೀಶ್, ಚಂದ್ರಶೇಖರ ಆಚಾರ್ಯ, ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಶಲ ಎಂ. ಪೆರಾಜೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಂಭು ಶರ್ಮ, ಮಾಣಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಜಾತ ಪೂಜಾರಿ, ಮಾಜಿ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರುಗಳಾದ ರಮಣಿ ಡಿ. ಪೂಜಾರಿ, ಸೀತಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ, ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸತೀಶ್ ಪೂಜಾರಿ ಕೊಪ್ಪರಿಗೆ, ಅನಂತಾಡಿ ಗ್ರಾಮ ಪಂಚಾಯತ್ ಸದಸ್ಯೆ ಶಶಿಕಲ, ನೇರಳಕಟ್ಟೆ ಸಿ.ಎ. ಬೇಂಕ್, ನಿರ್ದೇಶಕ ಕೆ. ನಿರಂಜನ್ ರೈ, ನಾರಾಯಣ್ ಸಾಲ್ಯಾನ್ ಅನಂತಾಡಿ, ಅಶೋಕ್ ಕುಮಾರ್ ಬರಿಮಾರು ಮೊದಲಾದವರು ಭಾಗವಹಿಸಿದ್ದರು. ಇದೇ ವೇಳೆ ಸಂವಿಧಾನದ ದಿನದ ಅಂಗವಾಗಿ ಸಂವಿದಾನ ಶಿಲ್ಪಿ ಡಾ. ಬಿ.ಆರ್. ಅಂಬೆಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಸಲ್ಲಿಸಲಾಯಿತು. ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಾಜಿ ಅದ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.