August 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸರಪಾಡಿ‌ ಮಂಡಲ ಪಂಚಾಯತ್ ಮಾಜಿ ಅಧ್ಯಕ್ಷ ನಾರಾಯಣ ಆಳ್ವ ಪಡ್ಡಾಯಿಬೆಟ್ಟು ನಿಧನ

ಬಂಟ್ವಾಳ : ಸರಪಾಡಿ ಗ್ರಾಮದ ಪಡ್ಡಾಯಿಬೆಟ್ಟು ನಿವಾಸಿ, ಸರಪಾಡಿ ಮಂಡಲ ಪಂಚಾಯತ್ ಮಾಜಿ ಅಧ್ಯಕ್ಷ 89 ವರ್ಷ ಪ್ರಾಯದ ನಾರಾಯಣ ಆಳ್ವ ಪಡ್ಡಾಯಿಬೆಟ್ಟು ಅವರು  ಅಲ್ಪಕಾಲದ ಅಸೌಖ್ಯದಿಂದ ನವಂಬರ್ 26ರಂದು ಮಂಗಳವಾರ ನಿಧನ ಹೊಂದಿದರು. ಪ್ರಗತಿಪರ ಕೃಷಿಕರಾಗಿದ್ದ ನಾರಾಯಣ ಆಳ್ವ ಅವರು ಕಾಂಗ್ರೆಸ್ ಪಕ್ಷದಲ್ಲಿ ಸುದೀರ್ಘ ಸಮಯ ಸಕ್ರೀಯರಾಗಿದ್ದು, ಬಿ. ರಮಾನಾಥ ರೈ ಅವರ ಆಪ್ತರಾಗಿದ್ದರು.

ಸರಪಾಡಿ ಮಂಡಲ ಪಂಚಾಯತ್ ನಲ್ಲಿ ಸುದೀರ್ಘ 25 ವರ್ಷಗಳ ಕಾಲ‌ ಅಧ್ಯಕ್ಷರಾಗಿ, ಮಣಿನಾಲ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಸರಪಾಡಿ ಸರಕಾರಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ, ಸರಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪನೆಗೆ ಕಾರಣರಾಗಿ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಸರಳ – ಸಜ್ಜನಿಕೆಯ ವ್ಯಕ್ತಿತ್ವದೊಂದಿಗೆ ಜನಾನುರಾಗಿಯಾಗಿದ್ದರು. ಮೃತರು ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಿ. ಪದ್ಮಶೇಖರ್ ಜೈನ್, ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್, ಮಣಿನಾಲ್ಕೂರು ಸಿಎ ಬ್ಯಾಂಕ್ ಸಿಇಒ ಸುಧಾಕರ ಶೆಟ್ಟಿ ಹೆಗ್ಗಡೆ ಕೋಡಿ ಸೇರಿದಂತೆ ಹಲವು ಗಣ್ಯರು ಮೃತರ‌ ಅಂತಿಮ ದರ್ಶನ ಪಡೆದರು. ಮಾಜಿ ಸಚಿವ ಬಿ. ರಮಾನಾಥ ರೈ, ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

You may also like

News

ಕಸ ಗುಡಿಸುವ ಕಾಯಕದಿಂದ ಫಾರ್ಚುನರ್‌ವರೆಗೆ – ಸೇಸಪ್ಪ ಅವರ ಯಶೋಗಾಥೆ!

ಬಡತನ ಕನಸು ಕಾಣುವುದಕ್ಕೆ ಅಡ್ಡಿಯಾಗದು ಎಂಬುದಕ್ಕೆ ಬಂಟ್ವಾಳ ತಾಲೂಕಿನ ನಾವೂರು ನಿವಾಸಿ ಹಾಗೂ ಬಂಟ್ವಾಳ ಪುರಸಭೆಯ ಪೌರಕಾರ್ಮಿಕ ಸೇಸಪ್ಪ ಅವರ ಬದುಕು ಉತ್ತಮ ಉದಾಹರಣೆ. ಲಕ್ಷಾಂತರ ರೂಪಾಯಿ
News

ಪೊಂಪೈ ಕಾಲೇಜು ಐಕಳದಲ್ಲಿ ಮಾದಕ ವಸ್ತು, ಮಾನವ ಕಳ್ಳಸಾಗಣೆ ವಿರುದ್ಧ ಜಾಗೃತಿ

ಯುವಜನತೆ ಜಾಗೃತರಾದರೆ ಸಮಾಜ ಸುಧಾರಣೆ ಸಾಧ್ಯ – ಗಣೇಶ್ ಕುಮಾರ್ ಪೊಂಪೈ ಕಾಲೇಜು ಐಕಳದ ಆಂತರಿಕ ಗುಣಮಟ್ಟ ಭರವಸೆ ಕೋಶ, ಮಾನವ ಕಳ್ಳಸಾಗಣೆ ವಿರೋಧಿ ಸಂಘ, ಮಾದಕ

You cannot copy content of this page