May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಾರಾಯಣ ಗುರುಗಳು ಸಮಾನತೆಯ ವಿಶ್ವಮಾನವತೆಯ ಪ್ರತಿಪಾದಕರು – ಸ್ಮಿತೇಶ್ ಬಾರ್ಯ

ಬಂಟ್ವಾಳ : ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳು ಸಾಮಾಜಿಕ ಪ್ರಜ್ಞೆಯ ಅದ್ವೈತಿ ಸಂತರಂತೆ, ಎಲ್ಲರೂ ದೇವರ ಸೃಷ್ಟಿ, ಸರ್ವಜೀವಗಳಲ್ಲಿ ಸಮಾನತೆಯನ್ನೂ, ವಿಶ್ವಮಾನವತೆಯನ್ನೂ ಗುರುಗಳು ಪ್ರತಿಪಾದಿಸಿದರು ಎಂದು  ರಂಗಭೂಮಿ, ಚಲನಚಿತ್ರ ನಿರ್ದೇಶಕ ಸ್ಮಿತೇಶ್ ಎಸ್. ಬಾರ್ಯ ತಿಳಿಸಿದರು. ಅವರು ನವಂಬರ್ 28ರಂದು ಗುರುವಾರ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ  ಕುಡುಪು ರಾಜೇಶ್ ಬಿ. ಮೆಸ್ಕಾಂ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ 22 ನೇ ಮಾಲಿಕೆಯಲ್ಲಿ ಗುರು ಸಂದೇಶ ನೀಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಯುವವಾಹಿನಿ ಕೊಲ್ಯ ಘಟಕದ ಮಾಜಿ ಅಧ್ಯಕ್ಷ ಕುಸುಮಾಕರ್ ಕುಂಪಲ, ಯುವವಾಹಿನಿ ಬಂಟ್ವಾಳ ಘಟಕದ ಉಪಾಧ್ಯಕ್ಷ ನಾರಾಯಣ ಪಲ್ಲಿಕಂಡ, ನಿರ್ದೇಶಕ ಮಹೇಶ್ ಬೊಳ್ಳಾಯಿ, ಉದಯ್ ಮೆನಾಡು, ಮಾಜಿ ಅಧ್ಯಕ್ಷ ಪ್ರೇಮನಾಥ್ ಕರ್ಕೇರ, ರಾಜೇಶ್ ಸುವರ್ಣ, ಸದಸ್ಯರಾದ, ಪ್ರಶಾಂತ್ ಏರಮಲೆ, ಸುದೀಪ್ ರಾಯಿ, ಯತೀಶ್ ಬೊಳ್ಳಾಯಿ, ಸೂರಜ್ ತುಂಬೆ, ಜಗನ್ನಾಥ್ ಸುವರ್ಣ ಕಲ್ಲಡ್ಕ, ಹರೀಶ್ ಅಜೆಕಲ, ಅರ್ಜುನ್ ಅರಳ, ಮೆಸ್ಕಾಂ ಕುಲಶೇಖರದ ಮೇಲ್ವಿಚಾರಕರಾದ ಬಾಲಕೃಷ್ಣ, ಜಯಪ್ರಕಾಶ್ ಹಾಗೂ ಮೆಸ್ಕಾಂ ವಾಮಂಜೂರು ಶಾಖೆಯ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

ಗುರುಸಂದೇಶ ನೀಡಿದ ಸ್ಮಿತೇಶ್ ಬಾರ್ಯ ಹಾಗೂ ಪ್ರಜಿತ್ ಅಮೀನ್ ಇವರನ್ನು ರಾಜೇಶ್ ಬಿ. ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು. ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ ಸ್ವಾಗತಿಸಿ ವಂದಿಸಿದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page