July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜಿಲ್ಲೆಯ ಜನ ಕಾಂಗ್ರೆಸ್ ನ ಅಭಿವೃದ್ಧಿಗೆ ಬೆಂಬಲ – ಜಿಲ್ಲಾಧ್ಯಕ್ಷ ಹರೀಶ್ ಕುಮಾರ್

ಮಂಗಳೂರು : ವಿಧಾನ ಸಭೆಯ ಮೂರು ಕ್ಷೇತ್ರ ಹಾಗೂ ಗ್ರಾಮ ಪಂಚಾಯತ್ ಉಪಚುನಾವಣೆಯನ್ನು ಗಮನಿಸಿದಾಗ ಮತದಾರ ಕಾಂಗ್ರೆಸ್ ಪರ ಒಲವು ಹೊಂದಿರುವುದು ದೃಢವಾಗಿದೆ. ದಕ್ಷಿಣ ಕನ್ನಡದಲ್ಲೂ ಬದಲಾವಣೆಯ ವಾತಾವರಣವಿದ್ದು, 30 ಗ್ರಾಮ ಪಂಚಾಯತ್ ಕ್ಷೇತ್ರಗಳು ಮತ್ತು ಪುರಸಭೆಯ 1 ಕ್ಷೇತ್ರ ಸಹಿತ ಒಟ್ಟು 31 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ 24 ಕ್ಷೇತ್ರಗಳನ್ನು ಗೆದ್ದಿದೆ, ಬಿಜೆಪಿ 7ಕ್ಕೆ ಕುಸಿದಿದೆ. ಜಿಲ್ಲೆಯ ಜನ ಕಾಂಗ್ರೆಸ್ ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ ನೀಡಿರುವುದು ಸಾಬೀತಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ.

ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ 31 ಕ್ಷೇತ್ರಗಳ ಪೈಕಿ ಚುನಾವಣೆಯ ಮೊದಲು 14ರಲ್ಲಿ ಕಾಂಗ್ರೆಸ್ ಬೆಂಬಲಿಗರು ಇದ್ದರೆ ಬಿಜೆಪಿ ಸಂಖ್ಯೆ 17 ಇತ್ತು. ಕಳೆದ ವಿಧಾನಸಭಾ ಚುನಾವಣೆಗಿಂತ ಮುಂಚೆ ಗ್ಯಾರಂಟಿ ಯೋಜನೆಗಲು ಜಾರಿಯಾಗುವುದಿಲ್ಲ ಎಂಬ ಬಿಜೆಪಿಗರ ಅಪಪ್ರಚಾರವನ್ನು ಜನ ನಂಬಿದ್ದರು. ಈಗ ಗ್ಯಾರಂಟೀ ಯಶಸ್ವಿಯಾಗಿ ಅನುಷ್ಠಾನವಾಗಿರುವುದರಿಂದ ಜನ ಬಿಜೆಪಿಯ ಅಪಪ್ರಚಾರಗಳಿಗೆ ಸೊಪ್ಪು ಹಾಕಿಲ್ಲ. ಮುಂದಿನ ವರ್ಷ ಮಂಗಳೂರು ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗಳು ನಡೆಯಲಿದ್ದು ಕಾಂಗ್ರೆಸ್ ಗೆದ್ದು ಅಧಿಕಾರದ ಗದ್ದುಗೆ ಏರುವುದು ನಿಶ್ಚಿತ. ಗ್ಯಾರಂಟಿ ಫಲಾನುಭವಿ ಮಹಿಳಾ ಮತದಾರರು ಕಾಂಗ್ರೆಸ್ ಜೊತೆಗಿದ್ದಾರೆ ಎಂದು ಹರೀಶ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

You may also like

News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ
News

Former CSST General Councillor Sr Josephette Passes Away

The Congregation of the Carmelite Sisters of Saint Teresa (CSST) is mourning the passing of Sr Josephette, former General Councillor

You cannot copy content of this page