May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಹಲವು ಬಾರಿ ಠಾಣೆಗೆ ಅಲೆದಾಡಿದರೂ ದೂರು ದಾಖಲಿಸದ ಪೊಲೀಸರು: ದೂರುದಾರರಿಗೆ 20 ಸಾವಿರ ರೂಪಾಯಿ ಪರಿಹಾರ ನೀಡಲು ಹೈಕೋರ್ಟ್ ಆದೇಶ

ಪೊಲೀಸ್ ಠಾಣೆಗೆ ಹಲವಾರು ಬಾರಿ ಅಲೆದಾಡಿದರೂ ದೂರು ದಾಖಲಿಸದ ಮುಂಬೈ ಪೊಲೀಸರ ವಿರುದ್ಧ ಬಾಂಬೆ ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ. ಪೊಲೀಸರು ಮಾಡಿದ ಪ್ರಮಾದಕ್ಕೆ ದೂರುದಾರರಿಗೆ 20 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಮಹಾರಾಷ್ಟ್ರ ರಾಜ್ಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ರೇವತಿ ಮೋಹಿತ್ ದೇರೆ ಹಾಗೂ ಪ್ರಥ್ವಿರಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ತೀರ್ಪು ನೀಡಿದೆ.

ಬೆಂಗಳೂರು ಮೂಲದ ಅಭಿನವ್ ಮುಂಬೈನಲ್ಲಿ ಉದ್ಯೋಗದಲ್ಲಿ ಇದ್ದರು. ಈ ವೇಳೆ, ಸಹೋದ್ಯೋಗಿಗಳ ಕಿರುಕುಳಕ್ಕೆ ಬೇಸತ್ತು ಜನವರಿ 6ರಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ವಿಚಾರವಾಗಿ ಅವರ ತಂದೆ ಅನಿಲ್ ಕುಮಾರ್ ಮುಂಬೈ ರಾಕ್‌ಮಾರ್ಗ್‌ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಳ್ಳಲು ನಿರಾಕರಿಸಿದ್ದರು. ನಂತರ ದೂರುದಾರರು ಮ್ಯಾಜಿಸ್ಟ್ರೇಟ್ ಕೋರ್ಟ್ ಮೊರೆ ಹೋಗಿ ಅಲ್ಲಿಂದ ಪೊಲೀಸರಿಗೆ ದೂರು ದಾಖಲಿಸಿಕೊಳ್ಳುವಂತೆ ನ್ಯಾಯಾಲಯದಿಂದ ನಿರ್ದೇಶನ ಪಡೆದುಕೊಂಡಿದ್ದರು.

ಹಾಗಿದ್ದರೂ, ಪೊಲೀಸರು ಎಫ್‌ಐಆರ್ ದಾಖಲಿಸಿಕೊಳ್ಳಲು ನಿರಾಕರಿಸಿದ್ದರು. ಕೋರ್ಟ್ ಆದೇಶವನ್ನೇ ಪೊಲೀಸರು ಧಿಕ್ಕರಿಸಿದಾಗ, ಎಫ್‌ಐಆರ್ ಹಾಕಲು ನಿರಾಕರಿಸಿದಾಗ ಮೃತರ ಹೆತ್ತವರು ಹೈಕೋರ್ಟ್‌ ಮೊರೆ ಹೋದರು. ಮನವಿಯಲ್ಲಿ ಮ್ಯಾಜಿಸ್ಟ್ರೇಟರ ಆದೇಶದಂತೆ ಎಫ್‌ಐಆರ್ ದಾಖಲಿಸಲು ನಿರ್ದೇಶನವನ್ನು ಕೋರಿದರು. ಮನವಿ ಆಲಿಸಿದ ವಿಭಾಗೀಯ ಪೀಠ, ಜೂನ್ ತಿಂಗಳಲ್ಲಿ ಮ್ಯಾಜಿಸ್ಟ್ರೇಟ್ ಆದೇಶ ನೀಡಿದ ನಂತರವೂ ಪೊಲೀಸರು ಎಫ್‌ಐಆರ್ ದಾಖಲಿಸದೇ ಇರುವುದು ಮತ್ತು ಅರ್ಜಿದಾರರನ್ನು ದೂರು ದಾಖಲಿಸುವ ವಿಚಾರವಾಗಿ ಈ ರೀತಿ ಅಲೆದಾಡಿಸಿರುವುದಕ್ಕೆ 20 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಆದೇಶ ನೀಡಿದೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page