ಮುಲ್ಕಿಯ ಕಿಲ್ಪಾಡಿ ಬೆಥನಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಾರ್ಷಿಕ ಬಹುಮಾನ ವಿತರಣಾ ಕಾರ್ಯಕ್ರಮ
ಮುಲ್ಕಿ : ವಿದ್ಯಾರ್ಥಿಗಳು ರಚನಾತ್ಮಕ ಚಟುವಟಿಕೆಗಳಲ್ಲಿ ಭಾಗಿಯಾಗುವ ಮೂಲಕ ಶಿಕ್ಷಣ ಸಂಸ್ಥೆಯ ಸರ್ವಾಂಗೀನ ಬೆಳವಣಿಗೆಯಲ್ಲಿ ಸಹಕರಿಸಬೇಕು ಎಂದು ಮುಲ್ಕಿ ಪೊಲೀಸ್ ಠಾಣಾಧಿಕಾರಿ ಅನಿತಾ ಹೇಳಿದರು.
ಕಿಲ್ಪಾಡಿ ಬೆಥನಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ವಾರ್ಷಿಕ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು. ಹೆತ್ತವರು ಸದಾ ವಿದ್ಯಾರ್ಥಿಗಳ ಬೆನ್ನೆಲುಬಾಗಿದ್ದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕಾಗಿ ಹಾಗೂ ಮೊಬೈಲ್ ಗಳನ್ನು ತಮ್ಮ ಮಗುವಿಗೆ ನೀಡದೆ ತಮ್ಮ ಅಮೂಲ್ಯ ಸಮಯವನ್ನು ತಮ್ಮ ಮಕ್ಕಳೊಂದಿಗೆ ಕಳೆಯುವುದು ಉತ್ತಮ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಲ್ಕಿ ಮೆಡಲಿನ್ ಹೈಸ್ಕೂಲ್ ನ ಮುಖ್ಯ ಶಿಕ್ಷಕಿ ವಂದನೀಯ ಭಗಿನಿ ಜೆಸಿಂತಾ ಡಿಸೋಜಾ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಪ್ರತಿಭೆ ಅಡಕವಾಗಿರುತ್ತದೆ. ಸತತ ಪರಿಶ್ರಮದೊಂದಿಗೆ ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸಬೇಕು ಬಹುಮಾನಗಳನ್ನು ಗೆಲ್ಲುವುದಕ್ಕಿಂತ ಭಾಗವಹಿಸುವುದು ಮುಖ್ಯ ಪ್ರಯತ್ನ ನಿರಂತರವಾಗಿರಬೇಕು ಧನಾತ್ಮಕ ಚಿಂತನೆಗಳನ್ನು ಅಳವಡಿಸಿ ಕೊಳ್ಳಬೇಕು ಎಂದು ಕರೆ ನೀಡಿದರು.
ಶಾಲಾ ಮುಖ್ಯ ಶಿಕ್ಷಕಿ ವಂದನೀಯ ಭಗಿನಿ ರೀಟಾ ಶರಲ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಜೋಸ್ನಾ ಡಿ ಅಲ್ಮೇಡಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಸವಿತಾ ಹಾಗೂ ರಾಧಿಕ ಸ್ಪರ್ದಾ ವಿಜೇತರ ಪಟ್ಟಿಯನ್ನು ವಾಚಿಸಿದರು. ಸಹ ಶಿಕ್ಷಕಿ ಪ್ರೀಮಾ ಸ್ವಾಗತಿಸಿ, ಛಾಯಾ ವಂದಿಸಿದರು. ಶಶಿಕಲಾ ಕಾರ್ಯಕ್ರಮ ನಿರೂಪಿಸಿದರು.