April 21, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿದ್ಯಾಸಂಸ್ಥೆಯ ಬೆಳವಣಿಗೆಗೆ ಊರಿನವರ ಸಹಕಾರ ಅತಿ ಮುಖ್ಯ – ಶ್ರೀಮತಿ ಭಾರತಿ  ಸುರೇಂದ್ರ ರಾವ್

ಬಂಟ್ವಾಳ : ಒಂದು ವಿದ್ಯಾಸಂಸ್ಥೆಯ ಬೆಳವಣಿಗೆಗೆ ಊರಿನವರ ಸಹಕಾರ ಅತಿ ಮುಖ್ಯವಾಗಿದೆ. ಶಿಕ್ಷಣ ಕೇವಲ ಪಠ್ಯದಿಂದ ಮಾತ್ರವೇ ದೊರಕಲಾರದು. ತರಗತಿ ಕೋಣೆಗಳಲ್ಲಿ ವಿದ್ಯಾರ್ಥಿಗಳ ಭವಿಷ್ಯ ಅಡಗಿದೆ ಜೊತೆಗೆ ಅದಕ್ಕೆ ಪೂರಕವಾದ ಸಹಪಠ್ಯಗಳು ಮತ್ತು ಮಕ್ಕಳ ಹವ್ಯಾಸಗಳನ್ನು ಪ್ರತಿಭೆಗಳನ್ನು ಹೊರ ತರುವಲ್ಲಿ ವೇದಿಕೆಯು ಪ್ರಮುಖವಾಗಿದೆ. ಈ ದೃಷ್ಟಿಯಲ್ಲಿ ಶಾಲಾ ವಾರ್ಷಿಕೋತ್ಸವಗಳು ಮಕ್ಕಳಿಗೆ ಹೊಸ ಹುರುಪನ್ನು ತಂದು ಶೈಕ್ಷಣಿಕ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ಬದುಕಿನಲ್ಲಿ ಉತ್ತಮ ಫಲಿತಾಂಶವನ್ನು ಉಂಟು ಮಾಡುತ್ತವೆ. ಪರಿಸರ, ಪೋಷಕರು ಹಾಗೂ ವಿದ್ಯಾಭಿಮಾನಿಗಳು ಶಾಲಾ ಮತ್ತು ಮಕ್ಕಳ ಏಳಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಎಂದು ಕಡೇಶಿವಾಲಯ ಗ್ರಾಮ ಪಂಚಾಯತ್ ಅದ್ಯೆಕ್ಷೆ ಭಾರತಿ ಸುರೇಂದ್ರ ರಾವ್ ಹೇಳಿದರು.

ಅವರು ನವೆಂಬರ್ 30ರಂದು ಶನಿವಾರ ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಶೇರಾ ಇಲ್ಲಿ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕನ್ನಡ ಶಾಲೆಗಳ ಅಸ್ತಿತ್ವ ಪೋಷಕರ ಕೈಯಲ್ಲಿದೆ, ಇಂಗ್ಲೀಷ್ ವ್ಯಾಮೋಹಕ್ಕೆ ಬಲಿಯಾಗಿ ಕನ್ನಡ ಶಾಲೆಗಳು ಮುಚ್ಚುವ ಪರಿಸ್ಥಿತಿಗೆ ಬಂದಿದೆ, ಪೋಷಕರು ಮಕ್ಕಳಿಗೆ ಆಸ್ತಿ ಮಾಡದೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಮಕ್ಕಳನ್ನೇ ಆಸ್ತಿ ಮಾಡಿ ಎಂದು ಕಡೇಶಿವಾಲಯ ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷ ಸುರೇಶ್ ಬನಾರಿ ಹೇಳಿದರು.

ಈ ಸಂದರ್ಭದಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯ ಶಿಕ್ಷಕಿ ಕೋಮಲಾಂಗಿ ಬಾಬು ಗೌಡ ದಂಪತಿಗಳನ್ನು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕ ಲೋಕಯ್ಯ ಶೇರಾ ರವರನ್ನು ಶಾಲಾಭಿವೃದ್ಧಿ ಸಮಿತಿಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಕಡೇಶಿವಾಲಯ ಗ್ರಾಮದ ಸ್ವಚ್ಛತಾ ಸೇನಾಣಿಗಳಾದ ಲಕ್ಷ್ಮಿ, ಪ್ರಮೀಳಾ ಹಾಗೂ ಸವಿತಾ ಇವರನ್ನು ಅಭಿನಂದಿಸಲಾಯಿತು.

ಶಾಲಾ ವಾರ್ಷಿಕೋತ್ಸವ ನಿಮಿತ್ತ ಅಂಗನವಾಡಿ ಪುಟಾಣಿಗಳಿಗೆ ಹಾಗೂ ಶಾಲಾ ಮಕ್ಕಳಿಗೆ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು.  ಕಲಿಕೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಮಕ್ಕಳಿಗೆ ದಾನಿಗಳು ನೀಡಿದ ನಗದು ಬಹುಮಾನ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಶಾಲೆಯ ಅಭಿವೃದ್ಧಿಯ ದೃಷ್ಟಿಯಲ್ಲಿ ವಿಶೇಷವಾಗಿ ಸಹಕರಿಸಿದವರನ್ನು ಗುರುತಿಸಿ ಸ್ಮರಣೆ ಕೆ ನೀಡಿ ಗೌರವಿಸಲಾಯಿತು.  ಹಿರಿಯ ವಿದ್ಯಾರ್ಥಿಗಳಿಗೆ ನಡೆಸಿದ ಕ್ರೀಡಾಕೂಟದ ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ಮಾಣಿ ರೋಟರಿ ಕ್ಲಬ್ ಅಧ್ಯಕ್ಷ ಪುಷ್ಪರಾಜ್ ಹೆಗ್ಡೆ, ಐಡಿಯಲ್ ಕ್ಯಾಶ್ಯೂ ಇಂಡಸ್ಟ್ರೀಸ್ ಮಾಲಕ ಗಂಗಾಧರ್ ಶೇರಾ, ಬಿರುವೆರ್ ಕಡೇಶಿವಾಲಯದ ಅಧ್ಯಕ್ಷ ನಿವೃತ್ತ ಸೈನಿಕ ವಿದ್ಯಾದರ ಪೂಜಾರಿ, ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷ ನಾಗೇಶ್ ಕರ್ಕೇರ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಚಂದ್ರಶೇಖರ, ಮಾಜಿ ಅಧ್ಯಕ್ಷ ಚೆನ್ನಪ್ಪ ಎಸ್. ಅಂಜನ್, ಉಪಾಧ್ಯಕ್ಷೆ ಉಷಾ, ಮಾಜಿ ಉಪಾಧ್ಯಕ್ಷ ಮಹಮ್ಮದ್ ಹಬೀಬ್, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಿದಾನಂದ, ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಮಕ್ಕಳು ಪ್ರಾರ್ಥಿಸಿ, ಪ್ರಭಾರ ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ಸ್ವಾಗತಿಸಿ, ಶಿಕ್ಷಕ ಗೋಪಾಲಗೌಡ ಸದರಿ ವರ್ಷದ ವರದಿ ವಾಚಿಸಿ, ಶಿಕ್ಷಕಿ ಸುಮಲತಾ ಬಹುಮಾನಿತರ ಪಟ್ಟಿ ವಾಚಿಸಿ, ಶಿಕ್ಷಕಿ ಜೋಸ್ನಾ ಪ್ರಿಯಾ ವಾಸ್ ವಂದಿಸಿದರು. ಶಿಕ್ಷಕಿ ಅನಿತಾ ಕಾರ್ಯಕ್ರಮ ನಿರೂಪಿಸಿದರು.  ಸಭಾ ಕಾರ್ಯಕ್ರಮದ ಬಳಿಕ ಅಂಗನವಾಡಿ ಪುಟಾಣಿಗಳಿಂದ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.

You may also like

News

MLC ಐವನ್ ಡಿಸೋಜ ಹಾಗೂ ಕಥೊಲಿಕ್ ಸಭಾ ಕೇಂದ್ರಿಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ರವರಿಂದ ಬಿಷಪ್ಸ್ ಹೌಸ್ ನಲ್ಲಿ ಪೋಪ್ ರವರಿಗೆ ಅಂತಿಮ ನಮನ

ಕ್ರಿಶ್ಚಿಯನ್ನರ ಪರಮೋಚ್ಚ ಜಗದ್ಗುರು ಪೋಪ್ ಫ್ರಾನ್ಸಿಸ್ ರವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಇಂದು ಎಪ್ರಿಲ್ 21ರಂದು ಸೋಮವಾರ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ| ಪೀಟರ್
News

ಜಗದ್ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

ಲ್ಯಾಟಿನ್ ಅಮೆರಿಕದ ಮೊದಲ ಪೋಪ್ ಮತ್ತು ಆಧುನಿಕ ರೋಮನ್ ಕ್ಯಾಥೋಲಿಕ್ ಚರ್ಚ್‌ನಲ್ಲಿ ಪರಿವರ್ತನಾಶೀಲ ವ್ಯಕ್ತಿಯಾಗಿದ್ದ ಜಗದ್ಗುರು ಪೋಪ್ ಫ್ರಾನ್ಸಿಸ್ ಇಂದು ಏಪ್ರಿಲ್ 21ರಂದು ಸೋಮವಾರ ತಮ್ಮ 88

You cannot copy content of this page