January 18, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದೇಶದ ಅತ್ಯಂತ ಕಿರಿಯ ಪೈಲಟ್ ಆದ ಕೀರ್ತಿ ವಿಜಯಪುರದ ಸಮೈರಾ ಮಡಲಿಗೆ

ಗುಮ್ಮಟಿ ನಗರಿ ವಿಜಯಪುರ ಜಿಲ್ಲೆಯ ಸಮೈರಾ ಎಂಬ ಯುವತಿಯೊಬ್ಬರು ದೇಶದ ಅತ್ಯಂತ ಕಿರಿಯ ಪೈಲಟ್ ಆದ ಕೀರ್ತಿ ತನ್ನ ಮಡಿಲಿಗೆ ಗಿಟ್ಟಿಸಿಕೊಂಡು ವಿಜಯಪುರ ಹಾಗೂ ರಾಜ್ಯದ ಹಿರಿಮೆ ಹೆಚ್ಚಿಸಿದ್ದಾರೆ.

ಐತಿಹಾಸಿಕ ಜಿಲ್ಲೆಯಾಗಿ ವಿಜಯಪುರ ಹೆಚ್ಚು ಪ್ರಖ್ಯಾತಿ ಪಡೆದಿದೆ. ಜೊತೆಗೆ ಜಿಲ್ಲೆಯ ಅನೇಕರು ರಾಜ್ಯ ಸೇರಿದಂತೆ ದೇಶಕ್ಕೆ ಕೀರ್ತಿ ತಂದಿದ್ದಾರೆ. ಕ್ರೀಡೆ, ವಿಜ್ಞಾನ, ಸಾಹಿತ್ಯ ಸೇರಿದಂತೆ ಅನೇಕ ಕ್ಷೇತ್ರದಲ್ಲಿ ಸಾಧನೆಗೈದವರಿದ್ದಾರೆ. ಇದೀಗ ಮತ್ತೊಂದು ಸಾಧನೆಯಿಂದ ಜಿಲ್ಲೆಯ ಹಾಗೂ ರಾಜ್ಯದ ಹಿರಿಮೆ ಹೆಚ್ಚಿದೆ. 18 ವರ್ಷದ ಸಮೈರಾ ಹುಲ್ಲೂರು ಕಮರ್ಶಿಯಲ್ ಪೈಲಟ್ ಲೈಸನ್ಸ್ ಪಡೆಯುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಈ ಸಾಧನೆಯಿಂದ ಕುಟುಂಬದಲ್ಲಿ ಸಂತೋಷ ಮನೆ ಮಾಡಿದೆ. ಇತಿಹಾಸ ಸೃಷ್ಟಿಸಿರುವ ಸಮೈರಾ ವಿಜಯಪುರ ಜಿಲ್ಲೆ ಮಾತ್ರವಲ್ಲದೇ ರಾಜ್ಯದ ಕೀರ್ತಿಯ ಪತಾಕೆಯನ್ನು ಹಾರಿಸಿದ್ದಾರೆ.

ತಮ್ಮ ಶಿಕ್ಷಣವನ್ನು ವಿಜಯಪುರದಲ್ಲಿ ಮುಗಿಸಿ, ಆರು ತಿಂಗಳ ಕಾಲ ದೆಹಲಿಯಲ್ಲಿ ಪೈಲಟ್ ಟ್ರೇನಿಂಗ್ ಮುಗಿಸಿ 18ನೇ ವಯಸ್ಸಿಗೆ ಪೈಲಟ್ ಆಗಿ ಹೊರಹೊಮ್ಮಿದ್ದಾರೆ. 25ನೇ ವಯಸ್ಸಿಗೆ ಪೈಲಟ್ ಆಗಿರುವ ಕ್ಯಾಪ್ಟನ್ ತಪೇಶ್ ಕುಮಾರ್ ಇವರ ಈ ಸಾಧನೆಗೆ ಪ್ರೇರಣೆಯಾಗಿದ್ದಾರೆ. ಸಮೈರಾಳ ಸಾಧನೆಗೆ ಜಿಲ್ಲೆ, ರಾಜ್ಯ ಹಾಗೂ ದೇಶದ ಹಲವೆಡೆಯಿಂದ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ. ಹೆಣ್ಣು ಮಕ್ಕಳನ್ನು ಕಡೆಗಣಿಸುವ ಜನರಿಗೆ ಸಮೈರಾ ಕುಟುಂಬ ಮಾದರಿ ಆಗಿದೆ. ಜೊತೆಗೆ ಇಂದಿನ ಕಾಲದ ಯುವ ಪೀಳಿಗೆಗೆ ಸಮೈರಾ ಇವರ ಸಾಧನೆ ಪ್ರೇರಣೆ ಆಗಿದೆ.

You may also like

News

ಉಡುಪಿ – ಕಾಸರಗೋಡು – ಕಡಂದಲೆ 400 ಕೆ.ವಿ. ವಿದ್ಯುತ್ ಪ್ರಸರಣ ಯೋಜನೆಯನ್ನು ತಕ್ಷಣ ನಿಲ್ಲಿಸುವಂತೆ ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ

ಉಡುಪಿ – ಕಾಸರಗೋಡು – ಕಡಂದೆಲೆ 400 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗದಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಆಗುವ ತೊಂದರೆಗಳನ್ನು ಮಾನ್ಯ ಮುಖ್ಯಮಂತ್ರಿಯವರು ಕರ್ನಾಟಕ ಕ್ರೀಡಾಕೂಟ 2025
News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಕರ್ನಾಟಕ ಕ್ರೀಡಾಕೂಟ 2025 ಉದ್ಘಾಟನೆ

ಮಂಗಳೂರು : ಕರ್ನಾಟಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ಒಲಿಂಪಿಕ್ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿರುವ ಪ್ರಮುಖ ಕ್ರೀಡಾ ಕಾರ್ಯಕ್ರಮವಾದ ಕರ್ನಾಟಕ ಕ್ರೀಡಾಕೂಟ 2025

You cannot copy content of this page