May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಸಂವಿಧಾನ ದಿನಾಚರಣೆ ಹಾಗೂ ವಕೀಲರ ದಿನಾಚರಣೆಯ ಪ್ರಯುಕ್ತ ಕಾನೂನು ಕಾರ್ಯಗಾರ

ಬಂಟ್ವಾಳ : ವಕೀಲರ ಸಂಘ ಬಂಟ್ವಾಳ,  ಅಧಿವಕ್ತಾ ಪರಿಷತ್ ಕರ್ನಾಟಕ – ದಕ್ಷಿಣ ಪ್ರಾಂತ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಬಂಟ್ವಾಳ ಘಟಕ ಇವುಗಳ ಜಂಟಿ ಅಶ್ರಯದಲ್ಲಿ ಸಂವಿಧಾನ ಹಾಗೂ ವಕೀಲರ ದಿನಾಚರಣೆಯ ಪ್ರಯುಕ್ತ ಕಾನೂನು ಕಾರ್ಯಗಾರ ಮಂಗಳವಾರ ಬಂಟ್ವಾಳದ ಜೆ.ಎಂ.ಎಫ್.ಸಿ ನ್ಯಾಯಾಲಯದ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಭಾಗ್ಯಮ್ಮ ಅವರು ಉದ್ಘಾಟಿಸಿದರು. ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ರಿಚರ್ಡ್ ಡಿಕೊಸ್ತಾ ಎಂ. ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕಾರ್ಕಳದ ಹಿರಿಯ ನ್ಯಾಯವಾದಿ ಎಂ.ಕೆ. ವಿಜಯ್ ಕುಮಾರ್ ಅವರು ಪ್ರೊಫೆಶನಲ್ ಏಥಿಕ್ಸ್ ಇದರ ಬಗ್ಗೆ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಕೃಷ್ಣಮೂರ್ತಿ, ಅಧಿವಕ್ತಾ ಪರಿಷತ್ ಬಂಟ್ವಾಳದ ಅಧ್ಯಕ್ಷೆ ಉಮಾ ಏನ್. ಸೋಮಯಾಜಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅಧಿವಕ್ತಾ ಪರಿಷತ್ ನ ಸಮಾಜಿಕ ಕಾರ್ಯದ ಅಂಗವಾಗಿ ವಕೀಲರ ದಿನಾಚರಣೆಯ ಪ್ರಯುಕ್ತ ಪರಂಗಿಪೇಟೆ – ಅರ್ಕುಳದ ಶ್ರೀ ಮಾತಾ ಲಕ್ಷಣಿ ಶಾಂತಿಧಾಮ ಆಶ್ರಮಕ್ಕೆ ರೂಪಾಯಿ 32,000/ ಮೌಲ್ಯದ ಫ್ರಿಜ್ ನ್ನು  ಆಶ್ರಮದ ಸ್ಥಾಪಕರಾದ ಹರೀಶ್ ಪೆರ್ಗಡೆಯವರಿಗೆ ಹಸ್ತಾಂತರಿಸಲಾಯಿತು.  ಹಿರಿಯ ವಕೀಲರಾದ ಎಂ.ಕೆ. ವಿಜಯ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು.

ಯುವ ವಕೀಲೆ ಸ್ವರ್ಣ ಗೌರಿ ಸ್ವಾಗತಿಸಿ, ಅಧಿವಕ್ತಾ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಸದಸ್ಯ ವೀರೇಂದ್ರ ಎಂ. ಸಿದ್ದಕಟ್ಟೆ ವಂದಿಸಿದರು. ನಿತಿನ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page