September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಟ್ಲದ ಆಟೋ ಚಾಲಕ ನಾಪತ್ತೆ – ಪ್ರಕರಣ ದಾಖಲು

ವಿಟ್ಲ : ಆಟೋ ಚಾಲಕನೋರ್ವ  ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ಬಾಯಿಲ ನಿವಾಸಿ ಪದ್ಮನಾಭ ನಾಯ್ಕ ಅವರ ಪುತ್ರ 28ವರ್ಷ ಪ್ರಾಯದ ಧನರಾಜ್‌ ನಾಪತ್ತೆಯಾದ ಆಟೋ ಚಾಲಕ.

ಈತ ನವೆಂಬರ್ 28 ರಂದು ಎಂದಿನಂತೆ ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಬಾಯಿಲದಿಂದ ಬೆಳಿಗ್ಗೆ 8.30 ಕ್ಕೆ ತನ್ನ ಅಟೋ ರಿಕ್ಷಾವನ್ನು ತೆಗೆದುಕೊಂಡು ಬಾಡಿಗೆಗೆ ಹೋಗುತ್ತೇನೆಂದು ಹೇಳಿ ಹೋದವನು ದಶಂಬರ್ 03ರ ವರೆಗೂ ಮನೆಗೆ ಬಂದಿರುವುದಿಲ್ಲ ಈ ಬಗ್ಗೆ  ಸಂಬಂದಿಕರಲ್ಲಿ, ನೆರೆಕರೆಯವರಲ್ಲಿ ಹಾಗೂ ಸ್ನೇಹಿತರಲ್ಲಿ ವಿಚಾರಿಸಲಾಗಿ ಎಲ್ಲಿಯೂ ಪತ್ತೆಯಾಗದೆ ಕಾಣೆಯಾಗಿರುತ್ತಾನೆ. ಧನರಾಜ್‌ನ ರಿಕ್ಷಾ ಮಾತ್ರ ಉಪ್ಪಿನಂಗಡಿಯಲ್ಲಿದ್ದು ಆತನ ಮೊಬೈಲ್‌ ನಂಬ್ರ 9008117093 ಸ್ವೀಚ್‌ ಆಫ್‌ ಆಗಿರುತ್ತದೆ. ಮನೆಗೂ ಬಾರದೆ ಸಂಭಂದಿಕರ ಹಾಗೂ ಸ್ನೇಹಿತರ ಮನೆಗೂ ಹೋಗದೆ ಕಾಣೆಯಾದ ಧನರಾಜ್‌ನನ್ನು ಪತ್ತೆಮಾಡಿ ಕೊಡಬೇಕಾಗಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

You may also like

News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ
News

ಕ್ರೈಸ್ತ ಸಮುದಾಯದ ಕಲ್ಯಾಣಕ್ಕೆ ₹250 ಕೋಟಿ ಬಜೆಟ್ ಅನುದಾನ ಸಂಪೂರ್ಣ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಅವರಿಗೆ MLC ಐವನ್ ಡಿಸೋಜ ಮುಖಾಂತರ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು

You cannot copy content of this page