February 12, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಡೇಶಿವಾಲಯದಲ್ಲಿ ‘ಪ್ರತಿಭಾ ಪುರಸ್ಕಾರ 2024-25’

ಬಂಟ್ವಾಳ ತಾಲೂಕಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಡೇಶಿವಾಲಯ ಇಲ್ಲಿ 2024-25 ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ದಶಂಬರ್ 6ರಂದು ಶುಕ್ರವಾರ ಸಾಯಂಕಾಲ ಗಂಟೆ 3ರಿಂದ ನಡೆಯಲಿರುದು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡೇಶಿವಾಲಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತೀ ಎಸ್. ರಾವ್ ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟ್ವಾಳ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಮಾಡಲಿರುವರು.

ವಿಶೇಷ ಆಹ್ವಾನಿತರಾಗಿ ಕಡೇಶಿವಾಲಯ ಗ್ರಾಮ ಪಂಚಾಯತ್ ಉಪಾಧ್ಯಕ್ಷ  ಸುರೇಶ್ ಕನ್ನೋಟ್ಟು, ಪಂಚಾಯತ್ ಸದಸ್ಯರುಗಳಾದ ಶೀನ ನಾಯ್ಕ ನೆಕ್ಕಿಲಾಡಿ, ಪ್ರಮೀಳಾ ಕೋಡಿ, ವಶೀತಾ ನೆತ್ತರ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಮ್. ಜಿ., ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರದ ಪ್ರಭಾರ ಸಮನ್ವಯ ಅಧಿಕಾರಿ ವಿದ್ಯಾಕುಮಾರಿ, ಕಡೇಶಿವಾಲಯ ಗ್ರಾಮ ಪಂಚಾಯತ್  ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್, ಕಲ್ಲಡ್ಕ ವಲಯ ಶಿಕ್ಷಣ ಸಂಯೋಜಕಿ ಪ್ರತಿಮಾ ವೈ., ಕೆದಿಲ ಕ್ಲಸ್ಟರ್ ಸಿ.ಆರ್.ಪಿ. ಸುಧಾಕರ್ ಭಟ್, ಬೆಂಗಳೂರು ಕೆನರ ಇಂಡಸ್ಟ್ರೀಸ್ ಮುಖ್ಯಸ್ಥ ಉತ್ತಮ ಕುಮಾರ್ ಶೆಟ್ಟಿ, ಕಡೇಶಿವಾಲಯ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ವಿದ್ಯಾದರ್ ರೈ, ಕಡೇಶಿವಾಲಯ ಆಂಗ್ಲ ಮಾಧ್ಯಮ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಗಣೇಶ್ ಆರ್. ಶೆಟ್ಟಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶರತ್ ಮೊದಲಾದವರು ಭಾಗವಹಿಸಲಿರುವರು.

ಸಭಾ ಕಾರ್ಯಕ್ರಮದ ಬಳಿಕ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿರುವುದು ಎಂದು ಕಡೇಶಿವಾಲಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಹರಿಶ್ಚಂದ್ರ ಎಂ., ಆಂಗ್ಲ ಮಾಧ್ಯಮ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಮಾಧವ ರೈ, ಶಾಲಾ ಮುಖ್ಯ ಶಿಕ್ಷಕ ಬಾಬು ಪೂಜಾರಿ ಕೆ. ಜಂಟಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

You may also like

News

ಕಥೊಲಿಕ್ ಸಭಾ ಸುರತ್ಕಲ್ ವಲಯದ ದಶಮಾನೋತ್ಸವ ಸಂಭ್ರಮ

ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣ – ವೆಲೆಂಟೈನ್ ಡಿಸೋಜ ನಿವೃತ್ತ DSP   ಸುರತ್ಕಲ್ ಇಲ್ಲಿನ ಸೆಕ್ರೆಡ್ ಹಾರ್ಟ್ ಚರ್ಚ್ ಸಭಾಂಗಣದಲ್ಲಿ ಫೆಬ್ರವರಿ 8ರಂದು ಭಾನುವಾರ ಕಥೊಲಿಕ್
News

ಕಾಸರಗೋಡು ನಗರಸಭೆಯ 9ನೇ ವಾರ್ಡ್ ಸಭೆ ಯಶಸ್ವಿ

ಮಾದರಿ ನಗರಸಭೆ ನಿರ್ಮಾಣಕ್ಕೆ ನಗರಸಭಾ ಅಧ್ಯಕ್ಷೆ ಶಾಹಿನಾ ಸಲೀಂ ಸಂಕಲ್ಪ ಕಾಸರಗೋಡು ನಗರಸಭೆಯ 2026–27ನೇ ವಾರ್ಷಿಕ ಯೋಜನೆ ರೂಪಿಕರಣದ ಅಂಗವಾಗಿ 9ನೇ ವಾರ್ಡ್‌ನ ನುಳ್ಳಿಪಾಡಿ (ಅಣಂಗೂರು, ಜೆ.ಪಿ.

You cannot copy content of this page