ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಗೆ ಕಾನೂನು ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು, ದಶಂಬರ್ 5 :- ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಗೆ ಸಂಬಂಧಿಸಿದ ಭೂ ಕಂದಾಯ, ಭೂ ಮಂಜೂರಾತಿ ನಿಯಮ, ಭೂ ಸುಧಾರಣಾ, ಭೂ ಸ್ವಾಧೀನ ಕಾಯ್ದೆ, ನಿಯಮ ಇನ್ನಿತರ ಕಾಯ್ದೆ ನಿಯಮಗಳ ಪ್ರಕರಣಗಳಿಗೆ ಹಾಗೂ ಯಾವುದೇ ನ್ಯಾಯಾಲಯ ವ್ಯಾಜ್ಯಗಳ ಬಗ್ಗೆ ಕಾನೂನು ಸಲಹೆ ನೀಡಲು ಸೃಷ್ಟಿಸಲಾಗಿರುವ ಕಾನೂನು ಸಲಹೆಗಾರರ ಹುದ್ದೆಗೆ ನಿವೃತ್ತ ನ್ಯಾಯಾಧೀಶರು, ನಿವೃತ್ತ ಕಂದಾಯ ಇಲಾಖೆಯ ಅಧಿಕಾರಿಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿಗೆ ಒಳಪಟ್ಟು ರೂಪಾಯಿ 70,000 ವೇತನ ಮತ್ತು ನಿವೃತ್ತ ಕಂದಾಯ ಇಲಾಖೆಯ ನೌಕರರಿಗೆ (ನಿವೃತ್ತ ತಹಶೀಲ್ದಾರ್, ಉಪತಹಶೀಲ್ದಾರ್) ರೂಪಾಯಿ 40,000 ಮಾಸಿಕ ವೇತನ ನಿಗಧಿಗೊಳಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಬಯೋಡೇಟಾ ಮತ್ತು ದಾಖಲೆಗಳೊಂದಿಗೆ ಮಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿಸೆಂಬರ್ 20ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿ ಕಚೇರಿ, ಬಂದರ್ ರಸ್ತೆ, ಮಂಗಳೂರು ಇಲ್ಲಿ ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.