January 19, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತುಂಬೆ ವಲಯದ ನರಿಕೊಂಬು ಎ ಮತ್ತು ಬಿ ಒಕ್ಕೂಟ ಸದಸ್ಯರುಗಳಿಗೆ ಲಾಭಾಂಶ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಬಂಟ್ವಾಳ ಇದರ ತುಂಬೆ ವಲಯದ ನರಿಕೊಂಬು ಕಾರ್ಯಕ್ಷೇತ್ರದ ಎ ಮತ್ತು ಬಿ ಒಕ್ಕೂಟದ ಸದಸ್ಯರುಗಳಿಗೆ ಸದಸ್ಯರು ಸಂಘಗಳಲ್ಲಿ ಮಾಡಿದ ವ್ಯವಹಾರಗಳಿಗೆ ಸಿಗುವ ಲಾಭಾಂಶ ವಿತರಣಾ ಕಾರ್ಯಕ್ರಮ ತುಂಬೆ ವಯದ  ನರಿಕೊಂಬು ಕಾರ್ಯಕ್ಷೇತ್ರದಲ್ಲಿ ದಶಂಬರ್ 5ರಂದು ಗುರುವಾರ ಚಾಲನೆ ನೀಡಲಾಯಿತು.

 

ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಕುಮಾರ್ ಮಂಗಳ ದೇವಿ ಹಾಗೂ ಶಿವಶಕ್ತಿ ಸಂಘಕ್ಕೆ ಲಾಭಾಂಶದ ಪತ್ರ ವಿತರಿಸಿ ಮಾತನಾಡಿ ಗ್ರಾಮದ ಅಭಿವೃದ್ಧಿ ದೃಷ್ಟಿಯಲ್ಲಿ ವೀರೇಂದ್ರ ಹೆಗ್ಗಡೆಯವರ ದೂರ ದೃಷ್ಟಿಯ ಯೋಜನೆಗಳು ಬಹಳ ಪರಿಣಾಮಕಾರಿ ಬೀರಿದೆ. ಗ್ರಾಮದ ಶಾಲೆಗಳಿಗೆ, ದೇವಸ್ಥಾನಗಳಿಗೆ, ಹಾಗೂ ಸಮುದಾಯದ ಇನ್ನಿತರ ಕಾರ್ಯಗಳಿಗೆ ಯೋಜನೆಯಿಂದ ಸೇವಾ ರೂಪದಲ್ಲಿ ದೊರೆಯುವ ಅನುದಾನ ಗ್ರಾಮದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದೆ, ಯೋಜನೆಯ ಸಂಘಗಳ ಮೂಲಕ ಮಹಿಳೆಯರು ಸುಲಭ ರೀತಿಯಲ್ಲಿ ಸಾಲ ಸೌಲಭ್ಯ ಪಡೆದು ಸ್ವ ಉದ್ಯೋಗ ಕಲ್ಪಿಸಿಕೊಂಡು ಅಭಿವೃದ್ಧಿ ಹೊಂದಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕ ಪ್ರೇಮನಾಥ್ ಶೆಟ್ಟಿ ಅಂತರ, ಗ್ರಾಮಾಭಿವೃದ್ಧಿ ಯೋಜನೆಯ ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್, ನರಿಕೊಂಬು ಎ ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ ಸಪಲ್ಯ, ಉಪಾಧ್ಯಕ್ಷೆ ವಿಮಲ, ನರಿಕೊಂಬು ಬಿ ಒಕ್ಕೂಟದ ಅಧ್ಯಕ್ಷ ಜಯಂತ್ ಪಲ್ಲತ್ತಿಲ್ಲ, ನರಿಕೊಂಬು ಕಾರ್ಯಕ್ಷೇತ್ರದ ಒಕ್ಕೂಟಗಳ ಸೇವಾ ಪ್ರತಿನಿಧಿಗಳಾದ ಕುಸುಮಾವತಿ ಹಾಗೂ ಪ್ರತಿಭಾ, ಮಂಗಳ ದೇವಿ ಹಾಗೂ ಶಿವ ಶಕ್ತಿ ಸ್ವಸಹಾಯ ಸಂಘಗಳ ಸದಸ್ಯರುಗಳು ಉಪಸ್ಥಿತರಿದ್ದರು.

You may also like

News

ಕನ್ನಡ ಭವನ ಜಿಲ್ಲಾಧ್ಯಕ್ಷರಾಗಿ ಎಸ್. ನಂಜುಂಡಯ್ಯ ಚಾಮರಾಜನಗರ ಆಯ್ಕೆ

ಕಾಸರಗೋಡು : ಸಂಘಟಕ, ಸಾಹಿತಿ ಶಿಕ್ಷಕ, ಸಾಹಿತ್ಯ ಪರಿಷತ್, ಜಾನಪದ ಪರಿಷತ್ ಮೊದಲಾಗಿ ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯ ಹೆಚ್ಚಿನ ಸಂಘ, ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸಕ್ರಿಯರಾಗಿರುವ ಎಸ್.
News

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ

You cannot copy content of this page