September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳದ ಬಾಂಬಿಲದಲ್ಲಿ KSRTC ಬಸ್ಸು ಹಾಗೂ ಬೈಕ್ ಢಿಕ್ಕಿ – ಸವಾರ ಮೃತ್ಯು

ಬಂಟ್ವಾಳ :  KSRTC ಬಸ್ಸು ಹಾಗೂ ಬೈಕ್ ಢಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಬಿ.ಸಿ. ರೊಡು – ಪುಂಜಾಲಕಟ್ಟೆ ಹೆದ್ದಾರಿಯ ವಗ್ಗ ಸಮೀಪದ ಬಾಂಬಿಲದಲ್ಲಿ ದಶಂಬರ್ 5ರಂದು ಗುರುವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ನಿವಾಸಿ 45ವರ್ಷ ಪ್ರಾಯದ ರಾಜೇಂದ್ರ ಪೂಜಾರಿ ಮೃತಪಟ್ಟವರು. ಅವರು ಬಿ.ಸಿ. ರೋಡಿನಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ವೇಳೆ  ಈ ಅಪಘಾತ ನಡೆದಿದ್ದು, ಬಸ್ಸು ಬೆಳ್ತಂಗಡಿ ಭಾಗದಿಂದ ಮಂಗಳೂರಿಗೆ ತೆರಳುತ್ತಿತ್ತು.

ಮೃತ ರಾಜೇಂದ್ರ ಅವರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಸ್ಸು- ಬೈಕ್ ಢಿಕ್ಕಿ ಹೊಡೆದ ಜಾಗದ ಅನತಿ ದೂರದಲ್ಲಿ ದಶಂಬರ್ 4ರಂದು ಬುಧವಾರ ಸಂಜೆ ಕಾರು ಹಾಗೂ ಆಟೋ ರಿಕ್ಷಾ ಢಿಕ್ಕಿ ಹೊಡೆದು ಮಹಿಳೆಯೋರ್ವರು ಮೃತಪಟ್ಟು, ಇತರ ಪ್ರಯಾಣಿಕರು ಗಾಯಗೊಂಡಿದ್ದರು.

You may also like

News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ
News

ಕ್ರೈಸ್ತ ಸಮುದಾಯದ ಕಲ್ಯಾಣಕ್ಕೆ ₹250 ಕೋಟಿ ಬಜೆಟ್ ಅನುದಾನ ಸಂಪೂರ್ಣ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಅವರಿಗೆ MLC ಐವನ್ ಡಿಸೋಜ ಮುಖಾಂತರ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು

You cannot copy content of this page