April 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೋಮುಭಾವನೆ ಕೆರಳಿಸುವ ಅವಹೇಳನಕಾರಿ ಬರಹ – ಆರೋಪಿ ಬಂಧನ

ಬಂಟ್ವಾಳ : ಕೋಮುಭಾವನೆ ಕೆರಳಿಸುವ ಅವಹೇಳನಕಾರಿ ಬರಹ ಬರೆದು ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ ಸಾಮಾಜಿಕ ಜಾಲತಾಣದ ಮೂಲಕ ವೈರಲ್ ಮಾಡಿದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿದ್ದಾರೆ. ಅರಳ ಗ್ರಾಮದ ನವಗ್ರಾಮ ಸೈಟ್ ನಿವಾಸಿ ಜಯ ಪೂಜಾರಿ ಎಂಬಾತ ಬಂಧಿತ ಆರೋಪಿ.

ಆರೋಪಿ ‌ಜಯ ಪೂಜಾರಿ ತನ್ನ ಫೇಸ್ ಬುಕ್ ಖಾತೆಯಲ್ಲಿ ಧರ್ಮ ಧರ್ಮಗಳ ಮಧ್ಯೆ ಕೋಮುಭಾವನೆ ಕೆರಳುವ ರೀತಿಯಲ್ಲಿ, ಮಹಿಳೆಯರ ಬಗ್ಗೆ ಮಾನಕ್ಕೆ ಕುಂದುಂಟಾಗುವ,  ತೇಜೋವಧೆಯುಂಟಾಗುವ ರೀತಿಯಲ್ಲಿ  ಅವಹೇಳನಕಾರಿಯಾಗಿ ಬರಹ ಬರೆದು ಪೋಸ್ಟ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವಂತೆ ಮಾಡಿರುವುದರ ವಿರುದ್ದ ಬಂಟ್ವಾಳ ಗ್ರಾಮಾಂತರ ಪೋಲೀಸರು ಸುಮೋಟೋ ಕೇಸ್ ದಾಖಲಿಸಿ ಈತನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ಧರು. ಈತನಿಗೆ ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

You may also like

News

2026-27 ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ – ಮೇ 29ರಿಂದ ತರಗತಿ ಆರಂಭ

2026-27ನೇ ಸಾಲಿನ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ.
News

ಮಗಳನ್ನೇ ಕೊಂದ ತಾಯಿ ನೇಣಿಗೆ ಶರಣು – ವೈಟ್‌ಫೀಲ್ಡ್‌ನಲ್ಲಿ ಕೌಟುಂಬಿಕ ದುರಂತ

ಸಿಲಿಕಾನ್ ಸಿಟಿಯ ವೈಟ್‌ಫೀಲ್ಡ್‌ನ ಇಮ್ಮಡಿಹಳ್ಳಿಯಲ್ಲಿ ಮರುಕಳಿಸದಂತಹ ದಾರುಣ ಘಟನೆಯೊಂದು ನಡೆದಿದೆ. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತಾಯಿಯೊಬ್ಬರು ತನ್ನ ಸ್ವಂತ ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ತಾವೂ

You cannot copy content of this page