ಮಾಜಿ ಮುಖ್ಯ ಮಂತ್ರಿ ಎಸ್.ಎಂ. ಕೃಷ್ಣ ವಿಧಿವಶ – ನಾಳೆ ರಾಜ್ಯಾದ್ಯಂತ ಸರಕಾರಿ ರಜೆ ಘೋಷಣೆ
ಕರ್ನಾಟಕ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಬೆಂಗಳೂರಿನ ಸದಾಶಿವನಗರದಲ್ಲಿರುವ ಸ್ವಗೃಹದಲ್ಲಿ ಇಂದು ದಶಂಬರ್ 10ರಂದು ನಿಧನರಾಗಿರುವ ಹಿನ್ನಲೆ ಮೂರು ದಿನದಳ ಕಾಲ ರಾಜ್ಯದಲ್ಲಿ ಶೋಕಾಚರಣೆ ಘೋಷಿಸಲಾಗಿದೆ. ಶಾಲಾ ಕಾಲೇಜು, ಸರ್ಕಾರಿ ಕಚೇರಿ ಸೇರಿದಂತೆ ನಾಳೆ ದಶಂಬರ್ 11ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.
ಎಸ್.ಎಂ. ಕೃಷ್ಣ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಡಿ.ಕೆ. ಶಿವಕುಮಾರ್ ಬಳಿಕ ಮಾಧ್ಯಮದ ಜೊತೆ ಅಂತ್ಯಸಂಸ್ಕಾರ ವ್ಯವಸ್ಥೆ ಕುರಿತು ಮಾತನಾಡಿದ್ದಾರೆ. ಇದೇ ವೇಳೆ ನಾಳೆ ದಶಂಬರ್ 11ರಂದು ರಾಜ್ಯಾದ್ಯಂತ ರಜೆ ಘೋಷಣೆ ಮಾಡಿದ್ದಾರೆ. ಮೂರು ದಿನಗಳ ಕಾಲ ಕರ್ನಾಟಕದಲ್ಲಿ ಶೋಕಾಚರಣೆ ಇರಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಎಸ್.ಎಂ. ಕೃಷ್ಣ ವಿಧಿವಶರಾದ ಬೆನ್ನಲ್ಲೇ ಹುಟ್ಟೂರಾಗಿರುವ ಮಂಡ್ಯ ಜಿಲ್ಲೆಯಲ್ಲಿ ಸ್ಥಳೀಯ ಜಿಲ್ಲಾಡಳಿತ ರಜೆ ಘೋಷಣೆ ಮಾಡಿತ್ತು. ಇದೀಗ ಸರ್ಕಾರ ಅಧಿಕೃತವಾಗಿ ರಾಜ್ಯಾದ್ಯಂತ ರಜೆ ಘೋಷಣೆ ಮಾಡಿದೆ.
ನಾಳೆ ಬೆಳಗ್ಗೆ 8 ಗಂಟೆ ವರೆಗೆ ಬೆಂಗಳೂರಿನ ಮನೆಯಲ್ಲಿ ಎಸ್.ಎಂ. ಕೃಷ್ಣ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ. ಬಳಿಕ 10 ಗಂಟೆಯಿಂದ ಮಧ್ಯಾಹ್ನ ಮೂರು ಗಂಟೆ ವರೆಗೂ ಎಸ್.ಎಂ. ಕೃಷ್ಣ ಹುಟ್ಟೂರು ಮದ್ದೂರಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ದಶಂಬರ್ 11ರ ಮಧ್ಯಾಹ್ನ 3 ಗಂಟೆ ನಂತರ ಎಲ್ಲಾ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕರ್ನಾಟಕ ರಾಜ್ಯಕ್ಕೆ ದೊಡ್ಡ ಶಕ್ತಿಯಾಗಿದ್ದ ಎಸ್.ಎಂ. ಕೃಷ್ಣ ದಕ್ಷ ಆಡಳಿತ ನೀಡಿದ್ದಾರೆ. ಮಗಳು ಹಾಗೂ ಧರ್ಮ ಪತ್ನಿ ಫೋನ್ ಮಾಡಿ ನೀಡಿದ ತಕ್ಷಣವೇ ಬೆಂಗಳೂರಿಗೆ ಹೊರಟು ಬಂದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಅಧಿವೇಶನ ಸಂಬಂಧ ಬೆಳಗಾವಿಯಲ್ಲಿದ್ದ ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ ಆಗಮಿಸಿ ಎಸ್.ಎಂ. ಕೃಷ್ಣ ಅಂತಿಮ ದರ್ಶನ ಪಡೆದಿದ್ದಾರೆ.