January 20, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಾಮದಪದವು ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ 3 ತಿಂಗಳ ಉಚಿತ ಹೊಲಿಗೆ ತರಬೇತಿ ತರಗತಿ ಉದ್ಘಾಟನ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್  (ರಿ.) ಬಂಟ್ವಾಳ ತಾಲೂಕಿನ ವಗ್ಗ ವಲಯದ ವಾಮದಪದವಿನಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಪ್ರೇರಣ ಜ್ಞಾನವಿಕಾಸ ಕೇಂದ್ರದಲ್ಲಿ 3 ತಿಂಗಳ ಉಚಿತ ಹೊಲಿಗೆ ತರಬೇತಿ ತರಗತಿ ಪ್ರಾರಂಭಿಸಲಾಯಿತು. ಒಂದು ಮಹಿಳೆ ಸ್ವ ಉದ್ಯೋಗ ಕಾರ್ಯಗಳನ್ನು ಮಾಡಿ ಹೇಗೆ ಒಂದು ಮನೆಯನ್ನು ಅಭಿವೃದ್ಧಿ ಪಡಿಸಲು ಸಾಧ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಳಿಸಿ ಕೊಟ್ಟಿದೆ ಎಂದು ಬಾಲಭವನ ಸೊಸೈಟಿ ನಿಕಟ ಪೂರ್ವ ಅಧ್ಯಕ್ಷರಾದ ಸುಲೋಚನಾ ಜೆ.ಕೆ. ಭಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಾಮದಪದವ್ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯುವರಾಜ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಜ್ಞಾನವಿಕಾಸ ಕೇಂದ್ರ ಕರ್ನಾಟಕ ರಾಜ್ಯದಲ್ಲಿ ಎಲ್ಲ ಕಡೆ ವಿಸ್ತರಣೆ ಆಗಿ ಪಸರಿಸಿದೆ. ನಾವು ಯಾವುದೇ ಕೆಲಸ ಮಾಡುವಾಗ ಉತ್ಸಾಹಬೇಕು. ನಾವು ಸ್ವವಾಲಂಬಿ ಜೀವನ ನಡೆಸಬೇಕು ಎಂದು ಜಿಲ್ಲಾ ನಿರ್ದೇಶಕರು ಮಹಾಬಲ ಕುಲಾಲ್ ರವರು ಅಭಿಪ್ರಾಯ ಪಟ್ಟರು. 3 ತಿಂಗಳ ಉಚಿತ ಹೊಲಿಗೆ ತರಬೇತಿಗೆ ಗ್ರಾಮದ ಸುಮಾರು 40 ಮಂದಿ ಮಹಿಳೆಯರು ತರಗತಿಗೆ ಸೇರಿದ್ದು, ಇದರ ಪ್ರಾಯೋಜನ ಪಡೆಯಲಿದ್ದಾರೆ. ಜನಜಗೃತಿ ವೇದಿಕೆ ಸದಸ್ಯ ನವೀನ್ ಚಂದ್ರಶೆಟ್ಟಿ, ಒಕ್ಕೂಟ ಅಧ್ಯಕ್ಷೆ ಅನಿತಾ ಪ್ರಭು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕಿ ಸವಿತಾ, ಹೊಲಿಗೆ ತರಬೇತಿ ಶಿಕ್ಷಕಿ ಪವಿತ್ರ, ಸೇವಾಪ್ರತಿನಿಧಿ ಮೋಹನ್ ದಾಸ್ ಗಟ್ಟಿ, ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು. ಕೇಂದ್ರದ ಸಂಯೋಜಕಿ ಗುಣವತಿ  ಸ್ವಾಗತಿಸಿ, ಕೇಂದ್ರದ ಸದಸ್ಯೆ ಕವಿತಾ ವಂದಿಸಿದರು. ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರುತಿ ಕಾರ್ಯಕ್ರಮ ನಿರೂಪಿಸಿದರು.

You may also like

News

ಕನ್ನಡ ಭವನ ಜಿಲ್ಲಾಧ್ಯಕ್ಷರಾಗಿ ಎಸ್. ನಂಜುಂಡಯ್ಯ ಚಾಮರಾಜನಗರ ಆಯ್ಕೆ

ಕಾಸರಗೋಡು : ಸಂಘಟಕ, ಸಾಹಿತಿ ಶಿಕ್ಷಕ, ಸಾಹಿತ್ಯ ಪರಿಷತ್, ಜಾನಪದ ಪರಿಷತ್ ಮೊದಲಾಗಿ ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯ ಹೆಚ್ಚಿನ ಸಂಘ, ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸಕ್ರಿಯರಾಗಿರುವ ಎಸ್.
News

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

ಬೆಳ್ತಂಗಡಿ ಇತಿಹಾಸ ಪ್ರಸಿದ್ಧ ಧಾರ್ಮಿಕ ಸಮನ್ವಯ ಕೇಂದ್ರ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಕಾಜೂರು ಮಖಾಂ ಶರೀಫ್ ನಲ್ಲಿ ಈ‌ ವರ್ಷದ ಉರೂಸ್ ಮಹಾ

You cannot copy content of this page