May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

“ಕನ್ನಡ ಭವನ ಕಾಸರಗೋಡಿನ” ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆಯಾಗಿ ರೇಖಾ ಸುದೇಶ್ ರಾವ್ ಆಯ್ಕೆ

ಕಾಸರಗೋಡು: ವಿವಿಧ ಸಂಘಟನೆಗಳ ಪದಾಧಿಕಾರಿಯಾಗಿ, ವಿಶ್ವ ಸಾಹಿತ್ಯ ಬಳಗದ ಸಂಚಾಲಕಿಯಾಗಿ, ಸಾಹಿತ್ಯ, ಸಾಮಾಜಿಕ ಸೇವಾ ಧರ್ಮವನ್ನು ನಿರಂತರತೆಯ ಹಾದಿಯಲ್ಲಿ ಮುನ್ನಡೆಯುತ್ತಿರುವ ಇವರನ್ನು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾಧ್ಯಕ್ಷೆಯಾನ್ನಾಗಿ ಸಂಘಟಕಿ, ಲೇಖಕಿ, ಕವಯತ್ರಿ ರೇಖಾ ಸುದೇಶ್ ರಾವ್ ಇವರನ್ನು ಆಯ್ಕೆ ಮಾಡಲಾಗಿದೆ.

ಕನ್ನಡ ಭವನದ “ರಜತ ಸಂಭ್ರಮ” ವರ್ಷವಾದ 2025ರಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕನ್ನಡಪರ ಕಾರ್ಯಕ್ರಮ ಹಾಗೂ “ಮನೆಗೊಂದು ಗ್ರಂಥಾಲಯ, ಪುಸ್ತಕ ಸತ್ಯ – ಪುಸ್ತಕ ನಿತ್ಯ,” ಜನಜಾಗೃತಿ ಮೂಡಿಸುವ ಸಲುವಾಗಿ ಎಲ್ಲಾ ಜಿಲ್ಲೆಗಳಲ್ಲಿ ಘಟಕಗಳನ್ನು ಸ್ಥಾಪಿಸಲಾಗುತ್ತಿದ್ದು ಕಾಸರಗೋಡು ಕನ್ನಡ ಭವನದ ನಿರ್ದೇಶಕ ಡಾ. ಕೊಲಚಪ್ಪೆ ಗೋವಿಂದ ಭಟ್ ನಾಮನಿರ್ದೇಶನ ಮಾಡಿದ್ದು ಕನ್ನಡ ಭವನದ ಗೌರವ ಅಧ್ಯಕ್ಷ ಹಿರಿಯ ಪತ್ರಕರ್ತ ಪ್ರದೀಪ್ ಬೇಕಲ್ ಅನುಮೋದಿಸಿದರು.

ಸರ್ವಾನುಮತದಿಂದ ಆಯ್ಕೆಯಾದ ರೇಖಾ ಸುದೇಶ್ ರಾವ್ ಇವರು ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಯ, ಕನ್ನಡ ಭವನ ಉಚಿತ ವಸತಿ ಸೌಕರ್ಯ, ಕನ್ನಡ ಭವನ “ರಜತ ಸಂಭ್ರಮ 2025” ಈ ಮೇಲಿನ ಕಾರ್ಯಕ್ರಮ ಸಂಯೋಜನೆಯ ಜವಾಬ್ದಾರಿ ಸ್ವೀಕರಿಸಿ, ಜಿಲ್ಲಾ ಘಟಕವನ್ನು ವಿಸ್ತರಿಸಿ ಕಾರ್ಯ   ನಿರ್ವಹಿಸ ಬೇಕೆಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಹಾಗೂ ಕೋಶಧಿಕಾರಿ ಸಂದ್ಯಾ ರಾಣಿ ಟೀಚರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page