MLC ಐವನ್ ಡಿಸೋಜರ ಮನವಿಗೆ ತಕ್ಷಣ ಸ್ಪಂದಿಸಿ ಪರಿಹಾರ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಗಳೂರಿನ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಜೋಯ್ಸನ್, ಸೂರಜ್ ಹಾಗೂ ಲಾರೆನ್ಸ್ ಫೆರ್ನಾಂಡಿಸ್ ಇವರು ಬೆಳ್ತಂಗಡಿ ತಾಲೂಕಿನ ಬರ್ಕಾಜೆ ಡ್ಯಾಮ್ ವೀಕ್ಷಿಸಲು ಹೋಗಿ ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಹಾಗೂ ಮಂಗಳೂರಿನ ಕುಲಶೇಖರದ ನಿವಾಸಿಯಾಗಿರುವ ವಿನ್ಸೆಂಟ್ ಡಿಸೋಜಾ ಪೈಂಟಿಂಗ್ ಕೆಲಸ ಮಾಡುವಾಗ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆಯನ್ನು ಮಾನ್ಯ ಮುಖ್ಯಮಂತ್ರಿಗಳಿಗೆ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜಾ ಇವರು ವಿವರಿಸಿ., ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡುವಂತೆ ಮನವಿ ನೀಡಿ ವಿನಂತಿಸಿದಾಗ, ಮನವಿಗೆ ಮಾನ್ಯ ಮುಖ್ಯಮಂತ್ರಿಗಳು ತಕ್ಷಣ ಸ್ಪಂದಿಸಿ ಈ ಕುಟುಂಬದ ಆಧಾರ ಸ್ತಂಭವಾಗಿದ್ದ ಯುವಕರ ಕೌಟುಂಬಿಕ ಹಿನ್ನೆಲೆಯನ್ನು ಗಮನಿಸಿ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿಯಂತೆ ಪರಿಹಾರವಾಗಿ ನೀಡಲು ಆದೇಶಿಸಿರುತ್ತಾರೆ.