June 9, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪದವಿಯಲ್ಲಿ ತುಳು ಪಠ್ಯ – ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿ ವಂದನೀಯ ಡಾ. ಪ್ರವೀಣ್ ಮಾರ್ಟಿಸ್ ಇವರಿಗೆ ಸನ್ಮಾನ

ಮಂಗಳೂರು: ಪದವಿ ತರಗತಿಯಲ್ಲಿ ತುಳು ಪಠ್ಯವನ್ನು ಜಾರಿಗೊಳಿಸಿದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿಗಳಾದ ವಂದನೀಯ ಡಾ. ಪ್ರವೀಣ್ ಮಾರ್ಟಿಸ್ ಇವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಅಕಾಡೆಮಿ ಸದಸ್ಯರಾದ ಕುಂಬ್ರ ದುರ್ಗಾಪ್ರಸಾದ್ ರೈ, ನಾಗೇಶ್ ಕುಮಾರ್ ಉದ್ಯಾವರ, ಬೂಬ ಪೂಜಾರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಂತ ಅಲೋಶಿಯಸ್ ವಿಶ್ವವಿದ್ಯಾನಿಲಯವು ಮುಂದಿನ ದಿನಗಳಲ್ಲಿ ತುಳು ಸ್ನಾತಕೋತ್ತರ ಪದವಿ (ಎಂ.ಎ.)ಯನ್ನು ಆರಂಭಿಸುವಂತೆ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಇವರು ವಂದನೀಯ ಡಾ. ಪ್ರವೀಣ್ ಮಾರ್ಟಿಸ್ ಅವರನ್ನು ಈ ಸಂದರ್ಭದಲ್ಲಿ ಮನವಿ ಮಾಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ವಂದನೀಯ ಡಾ. ಪ್ರವೀಣ್ ಮಾರ್ಟಿಸ್ ಸ್ಥಳೀಯ ಸಂಸ್ಕೃತಿ, ಭಾಷೆಯ ಅಧ್ಯಯನಕ್ಕೆ ಅಲೋಶಿಯಸ್ ಶಿಕ್ಷಣ ಸಂಸ್ಥೆಯು ಪರಂಪರಗತವಾಗಿ ಮಹತ್ವದ ಕೊಡುಗೆಯನ್ನು ನೀಡುತ್ತಾ ಬಂದಿದೆ. ಇದರ ಮುಂದುವರಿದ ಭಾಗವಾಗಿ ಪದವಿ ಶಿಕ್ಷಣದಲ್ಲಿ ತುಳು ಪಠ್ಯವನ್ನು ಜಾರಿ ಮಾಡಿದ್ದೇವೆ. ಇದಕ್ಕೆ ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ ಎಂದರು.

ಸಂಸ್ಥೆಯ ‘ಸಾರಂಗ್’ ಸಮುದಾಯ ರೆಡಿಯೋ ಹಾಗೂ  ವಿವಿಧ ಅಧ್ಯಯನ  ವಿಭಾಗಗಳ ಮೂಲಕ ಪ್ರಾದೇಶಿಕ ಸಂಸ್ಕೃತಿಯ ಪ್ರಸಾರ, ಪ್ರಕಟಣೆ ಹಾಗೂ ಅಧ್ಯಯನಕ್ಕೆ ವಿಶೇಷ ಆದ್ಯತೆ ಮತ್ತು ಪ್ರೋತ್ಸಾಹವನ್ನು ನೀಡಲಾಗುತ್ತಿದೆ ಎಂದು ವಂದನೀಯ ಡಾ. ಪ್ರವೀಣ್ ಮಾರ್ಟಿಸ್ ತಿಳಿಸಿದರು.

You may also like

News

ಮಂಗಳೂರಿನ ಕುವರಿಗೆ ಒಲಿದ ದೂರದರ್ಶನ ಮನ್ನಣೆ : ಬಿ-ಗ್ರೇಡ್ ಭರತನಾಟ್ಯ ಕಲಾವಿದೆಯಾಗಿ ರೆಮೋನಾ ಎವೆಟ್ ಪೆರೇರಾ ಆಯ್ಕೆ

ಕರಾವಳಿಯ ಸಾಂಸ್ಕೃತಿಕ ನಗರಿ ಮಂಗಳೂರಿನ ಪ್ರತಿಭಾನ್ವಿತ ಯುವತಿ, ಕುಮಾರಿ ರೆಮೋನಾ ಎವೆಟ್ ಪೆರೇರಾ ಅವರು ಪ್ರಸಾರ ಭಾರತಿಯ ದೂರದರ್ಶನ ಚಂದನ ವಾಹಿನಿ ನಡೆಸಿದ ಕಠಿಣ ಆಡಿಷನ್‌ನಲ್ಲಿ ಯಶಸ್ವಿಯಾಗಿ
News

ಕಂಬಳ ಕೋಣಗಳ ಮಾಲೀಕನಿಗೆ ಹಲ್ಲೆ, ಸುಲಿಗೆ ಯತ್ನ ಪ್ರಕರಣ – ಮೂವರು KCOCA ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು

ಪುತ್ತೂರಿನ ಕಜೆ ಲಾ ಚೇಂಬರ್ಸ್ ಇದರ ಪ್ರಖ್ಯಾತ ವಕೀಲರಾದ ಮಹೇಶ್ ಕಜೆ ಅವರು ಮಂಡಿಸಿದ ವಾದ ಕಂಬಳದಲ್ಲಿ ಗೆದ್ದ ಕೋಣಗಳ ಮಾಲೀಕನಿಗೆ ಅಕ್ರಮ ಪ್ರವೇಶ ಮಾಡಿ ಹಲ್ಲೆ

You cannot copy content of this page