September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶ್ರೀ ಕುಪ್ಪೆಟ್ಟು ಪಂಜುರ್ಲಿ ಮೂಲಸ್ಥಾನ ಕುಪ್ಪೆಟ್ಟು ಬರ್ಕೆ ಕರ್ಪೆ ಬಂಟ್ವಾಳ ಇದರ ಜೀರ್ಣೋದ್ಧಾರ, ಪ್ರತಿಷ್ಠಾ ಮಹೋತ್ಸವದ ಕಾರ್ಯಕ್ರಮದ ಲಾಂಛನ ಬಿಡುಗಡೆ

ಬಂಟ್ವಾಳ ತಾಲೂಕಿನ ಶ್ರೀ ಕುಪ್ಪೆಟ್ಟು ಪಂಜುರ್ಲಿ ಮೂಲಸ್ಥಾನ ಕುಪ್ಪೆಟ್ಟು ಬರ್ಕೆ ಕರ್ಪೆ ಇದರ  ಜೀರ್ಣೋದ್ಧಾರ, ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಕುಪ್ಪೆಟ್ಟು ಬರ್ಕೆ ಕಾರ್ಯಕ್ರಮದ ಲಾಂಛನ ಬಿಡುಗಡೆ ಕಾರ್ಯಕ್ರಮ ಕುಪ್ಪೆಟ್ಟು ಬರ್ಕೆ ಚಾವಡಿಯಲ್ಲಿ ನಡೆಯಿತು.

ಪ್ರತಿಷ್ಠಾ ಮಹೋತ್ಸವ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಲೋಗೋ ಅನಾವರಣಗೊಳಿಸಿದರು. ಈ ಸಮಯದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರಭಾಕರ್ ಪ್ರಭು, ಕಾರ್ಯದರ್ಶಿ ನವೀನ್ ಹೊಸಹೊಕ್ಲು ಪ್ರತಿಷ್ಠಾ ಮಹೋತ್ಸವ ಸಮಿತಿ ಉಪಾಧ್ಯಕ್ಷರುಗಳಾದ ಕಿರಣ್ ಮಂಜಿಲ, ಜಯಪ್ರಕಾಶ್ ಜೆ.ಎಸ್., ಸತೀಶ್ ಪೂಜಾರಿ ಅಲಕ್ಕೆ, ಹೊರೆಕಾಣಿಕೆ ಸಮಿತಿ ಸಂಚಾಲಕ ದೇವಪ್ಪ ಪೂಜಾರಿ ನೆಕ್ಕರೆಗುಳಿ, ಮಹಿಳಾ ಸಮಿತಿ ಸಂಚಾಲಕಿ ರಂಜಿನಿ ದಿವಾಕರ್, ಕುಪ್ಪೆಟ್ಟು ಬರ್ಕೆ ಮನೆತನದ ಉಮೇಶ್ ಪೂಜಾರಿ, ಆಡಳಿತ ಸಮಿತಿ ಕೋಶಾಧಿಕಾರಿ ಜಯ ಪೂಜಾರಿ ಉಪಸ್ಥಿತರಿದ್ದರು.

ಪ್ರತಿಷ್ಠಾ ಮಹೋತ್ಸವ ಪ್ರಧಾನ ಕಾರ್ಯದರ್ಶಿ ರತ್ನಾಕರ್ ಮದಂಗೋಡಿ ಸ್ವಾಗತಿಸಿ, ಪ್ರಚಾರ ಸಮಿತಿ ಸಂಚಾಲಕ ದಿನೇಶ್ ಸುವರ್ಣ ರಾಯಿ ಲೋಗೋ ಬಿಡುಗಡೆಯ ಸಮಗ್ರ ಮಾಹಿತಿ ಹಾಗೂ ಮುಂದಿನ ಕಾರ್ಯ ವೈಖರಿಗಳ ಬಗ್ಗೆ ಮಾಹಿತಿ ನೀಡಿದರು. ಪ್ರತಿಷ್ಠಾ ಮಹೋತ್ಸವ ಸಮಿತಿ ಕೋಶಾಧಿಕಾರಿ ಪ್ರವೀಣ್ ಕುಪ್ಪೆಟ್ಟು ವಂದಿಸಿದರು.

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page