January 18, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳದಲ್ಲಿ ಕರಾವಳಿ ಕಲೋತ್ಸವ 2024-25 ಮತ್ತು ಬಹುಸಂಸ್ಕೃತಿ ಹಾಗೂ ಸುವರ್ಣ ಕರ್ನಾಟಕ ಸಂಭ್ರಮ

ಬಂಟ್ವಾಳ : ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಬಂಟ್ವಾಳ, ಚಿಣ್ಣರ ಲೋಕ ಸೇವಾ ಬಂಧು ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 20ರಿಂದ ಜನವರಿ 26ರ ವರೆಗೆ ಬಿ.ಸಿ. ರೋಡಿನ ಗೋಲ್ಡನ್ ಪಾರ್ಕ್ ಅಸೋಸಿಯೇಟ್ಸ್ ಮೈದಾನದಲ್ಲಿ ಕರಾವಳಿ ಕಲೋತ್ಸವ 2024-25 ಮತ್ತು ಬಹುಸಂಸ್ಕ್ರತಿ ಹಾಗೂ ಸುವರ್ಣ ಕರ್ನಾಟಕ ಸಂಭ್ರಮ ನಡೆಯಲಿದೆ ಎಂದು ಕರಾವಳಿ ಕಲೋತ್ಸವ ಅಧ್ಯಕ್ಷ  ಸುದರ್ಶನ ಜೈನ್ ತಿಳಿಸಿದ್ದಾರೆ.

ಬಿ.ಸಿ. ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಲ್ಡನ್ ಪಾರ್ಕ್ ಮೈದಾನದ ಕೀರ್ತಿಶೇಷ ಶ್ರೀ ರಘು ಸಪಲ್ಯ ಮೊಗರ್ನಾಡು ಕಲಾ ವೇದಿಕೆ, ದಿ॥ ಫಾರೂಕ್ ಗೂಡಿನ ಬಳಿ ಸಭಾಂಗಣದಲ್ಲಿ ಮಕ್ಕಳ ಚಿಣ್ಣರೋತ್ಸವ, ನಾಟಕೋತ್ಸವ, ರಾಜ್ಯ ಮಟ್ಟದ ಫಿಲ್ಮಿ ಡ್ಯಾನ್ಸ್ ಸ್ಪರ್ಧೆ, ಜಿಲ್ಲಾ ಮಟ್ಟದ ಸಿಂಗಾರಿ ಮೇಳ (ಚೆಂಡೆ) ಸ್ಪರ್ಧೆ, ಜಾನಪದ ನೃತ್ಯ, ಭರತನಾಟ್ಯ. ಯಕ್ಷಗಾನ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು ಎಂದರು.

ಜ್ನವರಿ 20ರಂದು ಬಿ.ಸಿ. ರೋಡಿನ ಶ್ರೀ ಅನ್ನಪೂರ್ಣೇಶ್ವರಿ ಕಲಾ ಮಂಟಪದಿಂದ ಜಾನಪದ ದಿಬ್ಬಣದ ಮೆರವಣಿಗೆಯು ಸುಮಾರು 250 ಮಂದಿ ಕಲಾವಿದರ ಜೊತೆ ರಾಜ್ಯ ಹಾಗೂ ಹೊರ ರಾಜ್ಯದ ಜಾನಪದ ತಂಡಗಳೊಂದಿಗೆ, ವೈವಿಧ್ಯಮಯ ಕಾರ್ಯಕ್ರಮಗಳ ಪ್ರಸ್ತುತಿಯೊಂದಿಗೆ ಬಿ.ಸಿ. ರೋಡಿನ ಗೋಲ್ಡನ್ ಪಾರ್ಕ್ ಮೈದಾನದ ಕೀರ್ತಿಶೇಷ ಶ್ರೀ ರಘು ಸಪಲ್ಯ ಮೊಗರ್ನಾಡು ಕಲಾ ವೇದಿಕೆ ದಿ॥ ಫಾರೂಕ್ ಗೂಡಿನ ಬಳಿ ಸಭಾಂಗಣದತ್ತ ಸಾಗಲಿದೆ.

ಸಂಜೆ ಗಂಟೆ 6.30ಕ್ಕೆ ಕರಾವಳಿ ಕಲೋತ್ಸವ ಉದ್ಘಾಟನೆ, ಕೀರ್ತಿಶೇಷ ಶ್ರೀ ರಘು ಸಪಲ್ಯ ಮೊಗರ್ನಾಡು ಕಲಾ ವೇದಿಕೆ ದಿ॥ ಫಾರೂಕ್ ಗೂಡಿನ ಬಳಿ ಸಭಾಂಗಣ ಉದ್ಘಾಟನೆ, ಅಮ್ಯೂಸ್‌ಮೆಂಟ್ ಪಾರ್ಕ್ ಉದ್ಘಾಟನೆ ಹಾಗೂ ವಿವಿಧ ಮಳಿಗೆಗಳ ಉದ್ಘಾಟನೆ ನಡೆಯಲಿದೆ. ಉದಯ ಚೌಟ ಸಾಧನ ಪ್ರಶಸ್ತಿ ಪ್ರದಾನ, ಚಿಣ್ಣರ ಸೌರಭ ರಾಜ್ಯ ಪ್ರಶಸ್ತಿ ಪ್ರದಾನ, ಅನಾರೋಗ್ಯ ಪೀಡಿತರಿಗೆ ವೈದ್ಯಕೀಯ ನೆರವು, ಬಳಿಕ  ರಾತ್ರಿ ಗಂಟೆ 7.00 ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಝೀ ಕನ್ನಡ ಸರಿಗಮಪ ಖ್ಯಾತಿಯ ಅಮೀಶ್ ಕುಮಾರ್, ಸಮನ್ವಿ ರೈ, ಅನ್ವಿತ್ ಕೊಡಗು ಮತ್ತು ಚಿಣ್ಣರಲೋಕ ಸಂಸ್ಥೆಯ ಬಾಲ ಕಲಾವಿದರಿಂದ “ರಸಮಂಜರಿ”ಮತ್ತು ಮಾ. ಸಾಯಿ ಮನ್ವಿತ್ ಕೊಟ್ಟಾರಿ ಮುನ್ನೂರು ಮತ್ತು ತಂಡ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾರ್ಥಮಿಕ ಶಾಲೆ ನರಿಕೊಂಬು ಇದರ ವಿದ್ಯಾರ್ಥಿಗಳಿಂದ “ಪಿಲಿ ನಲಿಕೆ”ಕಾರ್ಯಕ್ರಮ ನಡೆಯಲಿರುವುದು.

ಡಿಸೆಂಬರ್ 21ರಿಂದ ಜನವರಿ 5ರ ವರೆಗೆ ಪ್ರತಿನಿತ್ಯ ಸಭಾ ಕಾರ್ಯಕ್ರಮ ಹಾಗೂ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಅವರು ತಿಳಿಸಿದರು. ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್, ಸೇವಾಬಂಧು (ರಿ.) ಇದರ ಸ್ಥಾಪಕ, ಪ್ರಧಾನ ಸಂಚಾಲಕ ಮೋಹನ್ ದಾಸ ಕೊಟ್ಟಾರಿ ಮಾತನಾಡಿ, ಚಿಣ್ಣರಲೋಕ ನೋಂದಾಯಿತ ಸಂಸ್ಥೆಯಾಗಿದ್ದು ಕೇವಲ ಬಂಟ್ವಾಳ ತಾಲೂಕಿಗೆ ಮಾತ್ರ ಸೀಮಿತವಾಗದೆ ಜಿಲ್ಲೆಯಾದ್ಯಂತ ಹಲವು ಕಡೆಗಳಲ್ಲಿ ತನ್ನ ಶಾಖೆಯನ್ನು ಹೊಂದಿ ತನ್ನ ಚಟುವಟಿಕೆಗಳನ್ನು ಅವ್ಯಾಹತವಾಗಿ ನಡೆಸಿಕೊಂಡು ಬಂದಿದೆ.

ನುರಿತ ವಿಷಯ ಪರಿಣತದಿಂದ ಈ ಕ್ಷೇತ್ರಗಳಲ್ಲಿ ಎಳೆಯ ಮಕ್ಕಳಿಗೆ ತರಬೇತಿ ನೀಡುತ್ತಾ ಬರುತ್ತಿದೆ. ಇದೀಗ ಈ ಸಂಸ್ಥೆ ತನ್ನ ಕಾರ್ಯಕ್ಷೇತ್ರದ ಸಾಧನೆಯನ್ನು ಸಮುದಾಯಕ್ಕೆ ಮನವರಿಕೆ ಮಾಡಿಕೊಡಬೇಕು. ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯನ್ನು ಒದಗಿಸಿಕೊಡಬೇಕು. ಎಳೆಯರ ಮುಂದಾಳುತನಕ್ಕೆ ಹಿರಿಯರು ಸಹಕರಿಸಿ ಎಳೆಯರಿಂದ ಒಂದು ಸುಂದರ ಕಾರ್ಯಕ್ರಮ ಜರುಗಿಸಿ ಅವರಿಗೆ ಹೊಸ ಮಕ್ಕಳ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಬೆಳವಣಿಗೆಗೆ ಪೂರ್ವಕವಾಗಿ, ಸ್ಫೂರ್ತಿ ತುಂಬಬೇಕು ಎಂಬ ಸದುದ್ದೇಶದಿಂದ ಕರಾವಳಿ ಕಲೋತ್ಸವ ಕಾರ್ಯಕ್ರಮ ಪ್ರತಿ ವರ್ಷವೂ ಮಾಡುತ್ತಿದೆ ಎಂದು ಸಂಸ್ಥೆಯ ಸುದೀರ್ಘ ಕಾಲ ಸೇವೆ ಹಾಗೂ ನಡೆದು ಬಂದ ಹಾದಿಯ ಬಗ್ಗೆ ಮಾಹಿತಿ ನೀಡಿದರು.

ಪತ್ರಿಕಾ ಗೋಷ್ಠಿಯಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ತಾರಾನಾಥ ಕೊಟ್ಟಾರಿ, ಉಪಾಧ್ಯಕ್ಷೆ ಪೌಝಿಯಾ, ಗೌರವ ಸಲಹೆಗಾರ ಅಶೋಕ್ ಶೆಟ್ಟಿ ಸರಪಾಡಿ, ನಿರ್ದೇಶಕರಾದ ಇಬ್ರಾಹಿಂ ಕೈಲಾರ್, ಶಿವಪ್ರಸಾದ್ ಬಂಟ್ವಾಳ ಉಪಸ್ಥಿತರಿದ್ದರು.

You may also like

News

ಉಡುಪಿ – ಕಾಸರಗೋಡು – ಕಡಂದಲೆ 400 ಕೆ.ವಿ. ವಿದ್ಯುತ್ ಪ್ರಸರಣ ಯೋಜನೆಯನ್ನು ತಕ್ಷಣ ನಿಲ್ಲಿಸುವಂತೆ ಕಥೊಲಿಕ್ ಸಭಾ ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ

ಉಡುಪಿ – ಕಾಸರಗೋಡು – ಕಡಂದೆಲೆ 400 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗದಿಂದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಆಗುವ ತೊಂದರೆಗಳನ್ನು ಮಾನ್ಯ ಮುಖ್ಯಮಂತ್ರಿಯವರು ಕರ್ನಾಟಕ ಕ್ರೀಡಾಕೂಟ 2025
News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಕರ್ನಾಟಕ ಕ್ರೀಡಾಕೂಟ 2025 ಉದ್ಘಾಟನೆ

ಮಂಗಳೂರು : ಕರ್ನಾಟಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕರ್ನಾಟಕ ಒಲಿಂಪಿಕ್ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿರುವ ಪ್ರಮುಖ ಕ್ರೀಡಾ ಕಾರ್ಯಕ್ರಮವಾದ ಕರ್ನಾಟಕ ಕ್ರೀಡಾಕೂಟ 2025

You cannot copy content of this page