September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಣಿ ಗ್ರಾಮ ಪಂಚಾಯತ್ ಮತ್ತು ಅಂಚೆ ಇಲಾಖೆ ಪುತ್ತೂರು ವಿಭಾಗ ಇವರ ಜಂಟಿ ಆಶ್ರಯದಲ್ಲಿ ನಡೆದ ಆಧಾರ್ ಶಿಬಿರ

ಬಂಟ್ವಾಳ : ಆಧಾರ್ ಕಾರ್ಡ್ ಮುಂದಿನ ದಿನಗಳಲ್ಲಿ ಜನರ ಜೀವನಕ್ಕೇ ಆಧಾರ. ಆಧಾರ್ ಕಾರ್ಡ್ ಇಲ್ಲದೆ ಯಾವುದೇ ಚಟುವಟಿಕೆಗಳು ನಡೆಯಲು ಸಾಧ್ಯವಿಲ್ಲ. ಜನರು ಈ ಬಗ್ಗೆ ಜಾಗರೂಕರಾಗಬೇಕು ಎಂದು ಅಂಚೆ ಇಲಾಖೆಯ ಅಧಿಕಾರಿ ರಾಜೇಶ್ ಕುಮಾರ್ ಹೇಳಿದರು. ಇವರು ಮಾಣಿ ಗ್ರಾಮ ಪಂಚಾಯತ್ ಮತ್ತು ಅಂಚೆ ಇಲಾಖೆ ಪುತ್ತೂರು ವಿಭಾಗ ಇವರ ಜಂಟಿ ಆಶ್ರಯದಲ್ಲಿ ನಡೆದ ಆಧಾರ್ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾತನಾಡಿ ಹಿಂದೆ ಮಾಣಿ ಅಂಚೆ ಕಛೇರಿಯಲ್ಲಿ ಆಧಾರ್ ಕಾರ್ಡಿನ ನೋಂದಣಿ ಕಾರ್ಯ ನಿರಂತರವಾಗಿ ನಡೆಯುತ್ತಿತ್ತು. ಕೆಲವು ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿರುತ್ತದೆ. ಅದನ್ನು ಪುನರಾರಂಭಿಸಲು ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ವಿನಂತಿಸಲಾಗುವುದು. ಆಧಾರ್ ಕಾರ್ಡಿನ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ಈ ಶಿಬಿರವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಮಾಣಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಇಬ್ರಾಹಿಂ ಕೆ. ಮಾಣಿ, ಮಾಜಿ ಉಪಾಧ್ಯಕ್ಷೆ ಹಾಗೂ ಪ್ರಸ್ತುತ ಸದಸ್ಯೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರುಗಳಾದ ನಾರಾಯಣ ಶೆಟ್ಟಿ ತೋಟ, ರಮಣಿ ಡಿ. ಪೂಜಾರಿ ಮತ್ತು ಅಂಚೆ ಇಲಾಖೆಯ ಸುಶ್ಮಿತಾ ರೈ ಹಾಗೂ ನೂತನ್ ಬಂಗೇರ ಉಪಸ್ಥಿತರಿದ್ದರು.

ಮಾಣಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page