KSRTC ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಅಬ್ದುಲ್ ಕುಂಞ್ ಮೃತ್ಯು
KSRTC ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ತಾಲೂಕು, ಕಬಕ ಗ್ರಾಮದ ಮುರ ಎಂಬಲ್ಲಿ ಡಿಸೆಂಬರ್ 19ರಂದು ಗುರುವಾರ ಸಂಭವಿಸಿದೆ.
ಮೃತ ಬೈಕ್ ಸವಾರನನ್ನು 66ವರ್ಷ ಪ್ರಾಯದ ಅಬ್ದುಲ್ ಕುಂಞ್ ಎಂದು ಗುರುತಿಸಲಾಗಿದೆ. KSRTC ಬಸ್ ಪುತ್ತೂರು ಕಡೆಯಿಂದ ಕೆದಿಲ ಕಡೆಗೆ ಸಂಚರಿಸುತ್ತಿದ್ದ ಬೈಕಿಗೆ ಮುರ ಎಂಬಲ್ಲಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತ ತೀವ್ರತೆಗೆ ಬೈಕ್ ಸವಾರ ಬೈಕ್ ಸಮೇತ ರಸ್ತೆಗೆ ಬಿದ್ದು, ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಿದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.