ಬಂಧನದಿಂದ ಶಾಸಕ ಸಿ.ಟಿ. ರವಿ ತಕ್ಷಣ ಬಿಡುಗಡೆಗೆ ಹೈಕೋರ್ಟ್ ಆದೇಶ
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ದ ಆಕ್ಷೇಪಾರ್ಹ ಮತ್ತು ಅಶ್ಲೀಲ ಪದ ಬಳಕೆ ಮಾಡಿರುವ ಕುರಿತಂತೆ ವಿಧಾನ ಪರಿಷದ್ ಸದಸ್ಯ ಸಿ.ಟಿ. ರವಿ ಇವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳರ್ ವಿರುದ್ಧದ ಹೇಳಿಕೆ ವಿಚಾರದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿಯನ್ನು ಬಂಧಿಸಲಾಗಿತ್ತು.
ಶಾಸಕ ಸಿ.ಟಿ. ರವಿ ವಿರುದ್ಧದ ಎಫ್‌ಐಆರ್ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ತಕ್ಷಣ ಬಿಡುಗಡೆಗೆ ಮಧ್ಯಂತರ ಆದೇಶ ಹೊರಡಿಸಿದೆ ಅಲ್ಲದೆ ತನಿಖೆಗೆ ಸಹಕರಿಸಬೇಕೆಂದು ಷರತ್ತು ವಿಧಿಸಿದೆ.