August 6, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದಕ್ಷಿಣ ಕನ್ನಡ ಪೊಲೀಸ್ ವ್ಯಾಪ್ತಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯು ಶೀಘ್ರವೇ ಬಂಟ್ವಾಳಕ್ಕೆ ಸ್ಥಳಾಂತರ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರವಾದ ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿದ್ದ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಸೆನ್ (ಸೈಬರ್ ಕೈಂ) ಪೊಲೀಸ್ ಠಾಣೆಯು ಶೀಘ್ರವೇ ಬಂಟ್ವಾಳಕ್ಕೆ ಸ್ಥಳಾಂತರಗೊಳ್ಳಲಿದೆ. ಇದರಿಂದ ಜಿಲ್ಲೆಯ ಗ್ರಾಮಾಂತರ ಭಾಗದ ಜನತೆಗೆ ಸೈಬರ್ ಕ್ರೈಂಗೆ ಸಂಬಂಧ ಪಟ್ಟ ಪ್ರಕರಣಗಳ ಬಗ್ಗೆ ದೂರು ನೀಡಲು ಅನುಕೂಲವಾಗಲಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯ ಹಳೆಯ ಕಟ್ಟಡವನ್ನು ನವೀಕರಿಸುವ ಕಾರ್ಯ ಭರದಿಂದ ಸಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಬರುವ ಯಾವುದೇ ಪ್ರದೇಶದಲ್ಲಿ ಸೈಬರ್ ಕ್ರೈಮ್ ಪ್ರಕರಣಗಳು ನಡೆದರೂ ಸಂತ್ರಸ್ತರು ದೂರು ನೀಡುವುದಕ್ಕೆ ಮಂಗಳೂರಿಗೆ ತೆರಳಬೇಕು. ಇದರಿಂದ ಜಿಲ್ಲೆಯ ಗ್ರಾಮೀಣ ಪ್ರದೇಶದ ನಾಗರಿಕರಿಗೆ ಅನಾನುಕೂಲವಾಗುತ್ತಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶದ ಜನರು ದೂರು ನೀಡಲು ಮಂಗಳೂರಿಗೆ ತೆರಳಬೇಕು ಎನ್ನುವ ಕಾರಣದಿಂದ ಸಣ್ಣ ಪ್ರಕರಣಗಳಾದರೆ ದೂರು ನೀಡುವುದಕ್ಕೆ ಹೋಗುತ್ತಿರಲಿಲ್ಲ. ಆದರೆ ಇನ್ನು ಠಾಣೆಯು ಹತ್ತಿರದಲ್ಲಿದೆ ಎಂದು ಹೆಚ್ಚಿನ ಮಂದಿ ಇಂತಹ ಪ್ರಕರಣಗಳಿಗೆ ಸಂಬಂಧಿಸಿ ದೂರು ನೀಡುವ ಸಾಧ್ಯತೆ ಹೆಚ್ಚಿದೆ.

ಮಂಗಳೂರಿನಲ್ಲಿ ಬಾಡಿಗೆ ಕಟ್ಟಡದಲ್ಲಿ ಸೆನ್ ಠಾಣೆಯು ಕಾರ್ಯಾಚರಿಸುತ್ತಿದ್ದು, ಜನರ ಅನುಕೂಲದ ಜತೆಗೆ ಸ್ವಂತ ಕಟ್ಟಡದಲ್ಲಿ ಕಾರ್ಯಾಚರಿಸುವ ಹಿನ್ನೆಲೆಯಲ್ಲಿ ಬಿ.ಸಿ. ರೋಡಿನಲ್ಲಿರುವ ಕಟ್ಟಡಕ್ಕೆ ಸ್ಥಳಾಂತರಗೊಳಿಸಲು ಇಲಾಖೆ ಚಿಂತಿಸಿದೆ. ಬಂಟ್ವಾಳದಲ್ಲಿ ನವೀಕರಣಗೊಳ್ಳುತ್ತಿರುವ ಕಟ್ಟಡವನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಅವರು ಪರಿಶೀಲಿಸಿ ನಿರ್ಮಾಣಕ್ಕೆ ಸಂಬಂಧಿಸಿ ಸೂಕ್ತ ಸಲಹೆ- ಸೂಚನೆಗಳನ್ನು ನೀಡಿದ್ದಾರೆ.

You may also like

News

ಮಂಗಳೂರು ವಿವಿ ನಿವೃತ್ತ ಪ್ರಾಧ್ಯಾಪಕಿ, ಹಿರಿಯ ಮಾಧ್ಯಮ ತಜ್ಞೆ ಡಾ. ವಹೀದಾ ಸುಲ್ತಾನ ನಿಧನ

ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ (MCJ) ವಿಭಾಗದ ನಿವೃತ್ತ ಮುಖ್ಯಸ್ಥೆ ಹಾಗೂ ಹಿರಿಯ ಪ್ರಾಧ್ಯಾಪಕಿ 70 ವರ್ಷ ಪ್ರಾಯದ ಡಾ. ವಹೀದಾ ಸುಲ್ತಾನಾ ಅವರು
News

ಮೈಸೂರು ಧರ್ಮಕ್ಷೇತ್ರದ ಸಹ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಗ್ರೇಶಿಯನ್ ರೊಡ್ರಿಗಸ್ ನೇಮಕ

ಮೈಸೂರು ಧರ್ಮಕ್ಷೇತ್ರದ ಸಹ ಸಾರ್ವಜನಿಕ ಸಂಪರ್ಕಾಧಿಕಾರಿ (Associate Public Relations Officer – APRO)ಯಾಗಿ ಗ್ರೇಶಿಯನ್ ರೊಡ್ರಿಗಸ್ ಅವರನ್ನು ನೇಮಕಗೊಳಿಸಲಾಗಿದೆ. ಈ ಕುರಿತು ಮೈಸೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ

You cannot copy content of this page