ಫೋನ್ ಹೆಚ್ಚು ನೋಡಬೇಡ ಎಂದು ಹೇಳಿದ ಪೋಷಕರು – ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ
ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ಮೊಬೈಲ್ ಫೋನ್ ಹೆಚ್ಚು ನೋಡಬೇಡ ಎಂದು ಪೋಷಕರು ಹೇಳಿದ್ದಕ್ಕೆ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ಯುವತಿ ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜಿನಲ್ಲಿ ಎರಡನೇ ವರ್ಷ ಓದುತ್ತಿದ್ದ 20 ವರ್ಷ ಪ್ರಾಯದ ಧನುಶ್ರೀ ಎಂದು ತಿಳಿದು ಬಂದಿದೆ.
ಇವಳಾನ್ನು ಚಿಕಿತ್ಸೆಗಾಗಿ ಮೇಗ್ಗನ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ. ಧನುಶ್ರೀ ಕಳೆದ ಮೂರು ದಿವಸಗಳ ಹಿಂದೆ ವಿಷ ಸೇವಿಸಿದ್ದಳು, ವಿಷ ಸೇವಿಸಿದ ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಡಿಸೆಂಬರ್ 26ರಂದು ಗುರುವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಧನುಶ್ರೀ ಮೊಬೈಲ್ ಫೋನ್ ಹೆಚ್ಚಾಗಿ ಬಳಸುತ್ತಿದ್ದ ಹಿನ್ನಲೆಯಲ್ಲಿ ಪೋಷಕರು ಮೊಬೈಲ್ ಫೋನ್‌ನ್ನು ಹೆಚ್ಚು ಬಳಸದೆ ಅಭ್ಯಾಸದ ಕಡೆ ಗಮನ ಕೊಡು ಎಂದು ಹೇಳಿದ್ದರು. ಈ ಕಾರಣಕ್ಕೆ ಯುವತಿ ವಿಷ ಸೇವಿಸಿದ್ದಳು.