January 16, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ – ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ

ಒಂದು ವಾರ ಶೋಕಾಚರಣೆ

ನವದೆಹಲಿ ಡಿಸೆಂಬರ್ 26 : ದೇಶದ ಮಾಜಿ ಪ್ರಧಾನಿ ಹಾಗೂ ಭಾರತದ ಖ್ಯಾತ ಅರ್ಥಶಾಸ್ತ್ರಜ್ಞ ಡಾ. ಮನಮೋಹನ್ ಸಿಂಗ್  ಇಂದು ಡಿಸೆಂಬರ್ 26ರಂದು ಗುರುವಾರ ತಡರಾತ್ರಿ ನಿಧನರಾಗಿದ್ದಾರೆ. ಅವರ ನಿಧನದ ಹಿನ್ನೆಲೆಯಲ್ಲಿ ಡಿಸೆಂಬರ್ 27ರಂದು ರಾಜ್ಯ ಸರಕಾರ ರಜೆ ಘೋಷಿಸಿದೆ. ಶಾಲಾ-ಕಾಲೇಜುಗಳು, ಬ್ಯಾಂಕ್ ಗಳು ಮತ್ತು ಸರಕಾರಿ ಕಚೇರಿಗಳು ಕಾರ್ಯನಿರ್ವಹಿಸುವುದಿಲ್ಲ. ಏಳು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.

ಡಾ. ಮನಮೋಹನ್ ಸಿಂಗ್ ಇವರು ತಮ್ಮ 93 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು. ಏಮ್ಸ್‌ ಆಸ್ಪತ್ರೆ ಅಧಿಕೃತ ಬುಲೆಟನ್‌ ನೀಡುವ ಮೂಲಕ ಮನಮೋಹನ್ ಸಿಂಗ್ ಅವರ ಸಾವಿನ ಬಗ್ಗೆ ತಿಳಿಸಿದೆ. ಗುರುವಾರ ಸಂಜೆಯ ವೇಳೆ ಅವರ ಆರೋಗ್ಯ ಹದಗೆಟ್ಟ ಕಾರಣದಿಂದ ಏಮ್ಸ್‌ ಆಸ್ಪತ್ರೆಯ ತುರ್ತು ವಿಭಾಗಕ್ಕೆ ದಾಖಲು ಮಾಡಲಾಗಿತ್ತು.

ಡಾ. ಮನಮೋಹನ್ ಸಿಂಗ್ ಅವರ ಹೆಸರಿಗೆ ಅನೇಕ ಸಾಧನೆಗಳಿವೆ. ಅವರು ಆರ್ಥಿಕ ಉದಾರೀಕರಣಕ್ಕೆ ವಿಶೇಷ ಕೊಡುಗೆ ನೀಡಿದ ನಾಯಕರು. ಹಣಕಾಸು ಸಚಿವರಾಗಿ ಸೇವೆ ಸಲ್ಲಿಸುತ್ತಿರುವಾಗ, ಡಾ. ಮನಮೋಹನ್ ಸಿಂಗ್ ಅವರು 1991 ರಲ್ಲಿ ಪ್ರಾರಂಭವಾದ ಆರ್ಥಿಕ ಉದಾರೀಕರಣದಲ್ಲಿ ಪ್ರಮುಖ ಪಾತ್ರವನ್ನು ವಹಿಸಿದರು. ಇದು ಸರ್ಕಾರದ ನಿಯಂತ್ರಣವನ್ನು ಕಡಿಮೆ ಮಾಡುವುದು, ವಿದೇಶಿ ನೇರ ಹೂಡಿಕೆಯನ್ನು (FDI) ಹೆಚ್ಚಿಸುವುದು ಮತ್ತು ಭಾರತದ ಆರ್ಥಿಕತೆಯನ್ನು ಜಾಗತಿಕ ಮಾರುಕಟ್ಟೆಗಳಿಗೆ ತೆರೆಯುವ ರಚನಾತ್ಮಕ ಸುಧಾರಣೆಗಳನ್ನು ಜಾರಿಗೆ ತರುವುದನ್ನು ಒಳಗೊಂಡಿತ್ತು. ಅದರೊಂದಿಗೆ ಜನರಲ್ಲಿ ಜನಪ್ರಿಯವಾಗಿರುವ ಐದು ಪ್ರಮುಖ ಯೋಜನೆಗಳು ಇಲ್ಲಿವೆ.

ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯಿದೆ (NREGA): 2005 ರಲ್ಲಿ ಪರಿಚಯಿಸಲಾದ ಈ ಕಾಯಿದೆಯು ಪ್ರತಿ ಗ್ರಾಮೀಣ ಕುಟುಂಬಕ್ಕೆ 100 ದಿನಗಳ ಕೂಲಿ ಉದ್ಯೋಗವನ್ನು ಖಾತರಿಪಡಿಸಿತು. ಲಕ್ಷಾಂತರ ಜನರ ಜೀವನೋಪಾಯವನ್ನು ಗಮನಾರ್ಹವಾಗಿ ಸುಧಾರಿಸುವ ಮತ್ತು ಗ್ರಾಮೀಣ ಮೂಲಸೌಕರ್ಯವನ್ನು ಹೆಚ್ಚಿಸುವ ಉದ್ದೇಶ ಹೊಂದಿತ್ತು.

ಮಾಹಿತಿ ಹಕ್ಕು ಕಾಯಿದೆ (RTI): 2005 ರಲ್ಲಿ ಅಂಗೀಕರಿಸಲ್ಪಟ್ಟ RTI ನಾಗರಿಕರಿಗೆ ಸಾರ್ವಜನಿಕ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆಯುವ ಹಕ್ಕನ್ನು ನೀಡುತ್ತದೆ. ಇದರಿಂದಾಗಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಉತ್ತೇಜಿಸಿತ್ತು.

ಆಧಾರ್ ಸೌಲಭ್ಯ: ನಿವಾಸಿಗಳಿಗೆ ವಿಶಿಷ್ಟ ಗುರುತನ್ನು ಒದಗಿಸಲು, ವಿವಿಧ ಸೇವೆಗಳಿಗೆ ಪ್ರವೇಶವನ್ನು ಒದಗಿಸಲು ಆಧಾರ್ ಯೋಜನೆಯನ್ನು ಇವರ ಅವಧಿಯಲ್ಲಿಯೇ ಆರಂಭಿಸಲಾಗಿತ್ತು.

ನೇರ ಲಾಭ ವರ್ಗಾವಣೆ: ಡಾ. ಮನಮೋಹನ್ ಸಿಂಗ್ ಅವರ ಸರ್ಕಾರವು ನೇರ ಲಾಭ ವರ್ಗಾವಣೆ ವ್ಯವಸ್ಥೆಯನ್ನು ಜಾರಿಗೆ ತಂದಿತು. ಇದು ಕಲ್ಯಾಣ ನಿಧಿ ವಿತರಣೆಯನ್ನು ಸರಳೀಕರಿಸಿತು ಮತ್ತು ಅನೇಕ ಲೋಪದೋಷಗಳನ್ನು ತೆಗೆದುಹಾಕಿತು.

ಕೃಷಿ ಸಾಲ ಮನ್ನಾ (2008): ಕೃಷಿ ಬಿಕ್ಕಟ್ಟು ನೀಗಿಸಲು 60,000 ಕೋಟಿ ರೂ.ಗಳ ಸಾಲ ಮನ್ನಾ ಮೂಲಕ ರೈತರಿಗೆ ಪರಿಹಾರ ಒದಗಿಸುವ ಕಾರ್ಯ ಮನಮೋಹನ್‌ ಸಿಂಗ್‌ ಸರ್ಕಾರ ಅಧಿಕಾರದಲ್ಲಿದ್ದಾಗ ಆಗಿತ್ತು.

You may also like

News

Faithful Depart with Blessings as the Infant Jesus Feast Ends in Mangaluru

The second day of the Infant Jesus Feast was a memorable and spiritually enriching experience for all attendees, with a
News

ಬೆನಕ ಆಸ್ಪತ್ರೆಯ ರಜತ ಸಂಭ್ರಮ – ಆಧುನಿಕ ತಂತ್ರಜ್ಞಾನದ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ

ಉಜಿರೆ : “ರೋಗಿಗಳ ಸೇವೆಗೆ ಕೇಂದ್ರೀಕೃತವಾಗಿ ಅತ್ಯುತ್ತಮ ದರ್ಜೆಯ ಅರೋಗ್ಯ ಸುಶ್ರೂಷೆಯನ್ನು ಎಲ್ಲರಿಗೂ ಕೈಗೆಟಕುವ ದರದಲ್ಲಿ ಹಾಗೂ ಸಮುದಾಯದ ಆಶಯಗಳಿಗೆ ಅನುಗುಣವಾಗಿ ಒದಗಿಸುವ ಆಸ್ಪತ್ರೆಯಾಗಿ ಬೆಳೆಯಬೇಕು ಎಂಬುವುದು

You cannot copy content of this page