September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಕಲಚೇತನರ ಬಸ್‍ಪಾಸ್ ನವೀಕರಣ

ಮಂಗಳೂರು, ಜನವರಿ 1:  2024ನೇ ಸಾಲಿನಲ್ಲಿ ವಿತರಿಸಿರುವ ಮಂಗಳೂರು ವಿಭಾಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಕಾಲ ಸಂಬಂಧಿತ ಸೇವೆಯಾದ ವಿಕಲಚೇತನರ ರಿಯಾಯಿತಿ ಬಸ್ ಪಾಸುಗಳ ಅವಧಿಯು ಮುಕ್ತಾಯಗೊಂಡಿದ್ದು, 2025ನೇ ಸಾಲಿಗಾಗಿ ಬಸ್ಸು ಪಾಸುಗಳನ್ನು ಜನವರಿ 1ರಿಂದ ನವೀಕರಿಸಲು ಕ್ರಮಕೈಗೊಳ್ಳಲಾಗಿದೆ.


ವಿಕಲಚೇತನರ ರಿಯಾಯಿತಿ ಬಸ್ಸು ಪಾಸುಗಳನ್ನು ಫಲಾನುಭವಿಗಳು ನವೀಕರಿಸಿಕೊಳ್ಳಲು ಅನುಕೂಲವಾಗುವಂತೆ ಕಾಲಮಿತಿ ನೀಡುವ ಉದ್ದೇಶದಿಂದ 2024ನೇ ಸಾಲಿನಲ್ಲಿ ವಿತರಿಸಿದ ಪಾಸುಗಳು ಫೆಬ್ರವರಿ 28ರವರೆಗೆ ಮಾನ್ಯವಾಗಿರುತ್ತದೆ. ವಿಕಲಚೇತನರ ರಿಯಾಯಿತಿ ಪಾಸುಗಳನ್ನು ಪಡೆಯಲು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು.

ಹೊಸ/ನವೀಕರಣ ಕ್ಕೆ ಬೇಕಾದ ದಾಖಲೆಗಳು:-

1 ಸ್ಟ್ಯಾಂಪ್ ಸೈಜಿನ ಮತ್ತು 2 ಪಾಸ್ ಪೋರ್ಟ್ ಸೈಜಿನ ಇತ್ತೀಚಿನ ಭಾವಚಿತ್ರ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ವಿತರಿಸುವ ಗುರುತಿನ ಚೀಟಿಯ ಮೂಲ ಪ್ರತಿಯನ್ನು (ಮಾನ್ಯತಾ ಅವಧಿ ಮುಗಿದಿರಬಾರದು)ಅಥವಾ ವಿಕಲಚೇತನ ವ್ಯಕ್ತಿಗಳಿಗೆ ಹೊಸದಾಗಿ ನೀಡಲಾಗಿರುವ UDID ಕಾರ್ಡುನ ಮೂಲಪ್ರತಿ, ವಿಳಾಸದ ದೃಢೀಕರಣ ದಾಖಲಾತಿ (ಆಧಾರ್‍ಕಾರ್ಡ್) ಮೂಲಪ್ರತಿ, ನಿಗಮದ ವಿಕಲಚೇತನರ ರಿಯಾಯಿತಿ ಬಸ್ಸುಪಾಸನ್ನು ಪಡೆಯುವ ಫಲಾನುಭವಿಗಳು ಸೂಕ್ತ ದಾಖಲೆಗಳನ್ನು JPEG ಹಾಗೂ PDF ನಮೂನೆಯಲ್ಲಿ ಸೇವಾಸಿಂಧು ಪೋರ್ಟಲ್‍ನಲ್ಲಿ ಅಪ್‍ಲೋಡ್ ಮಾಡಿ  ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಹಾಗೂ ಪಾಸ್‍ನ ಶುಲ್ಕ 660 ರೂಪಾಯಿ ನೀಡಿ ಪಾಸುಗಳನ್ನು ಪಡೆಯಬೇಕು. ಪಾಸುಗಳನ್ನು ನವೀಕರಿಸಲು ಫೆಬ್ರವರಿ 28 ಕೊನೆಯ ದಿನ.
2024ನೇ ಸಾಲಿನಲ್ಲಿ ವಿತರಿಸಿರುವ ಹಳೆಯ ಬಸ್ಸು ಪಾಸನ್ನು ಕಡ್ಡಾಯವಾಗಿ ಹಿಂತಿರುಗಿಸಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page