September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜನವರಿ ಅಂತ್ಯದೊಳಗೆ ಅಕ್ರಮ ಸಕ್ರಮ ಹಾಗೂ 94ಸಿ ಕಡತ ವಿಲೇವಾರಿಗೆ ಶಾಸಕ ಗುರುರಾಜ್ ಗಂಟಿಹೊಳೆ ಸೂಚನೆ

ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆಯವರು ಬೈಂದೂರು ತಹಸೀಲ್ದಾರ್ ಹಾಗೂ ಬೈಂದೂರು ಹೋಬಳಿಯ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳೊಂದಿಗೆ ತಾಲೂಕು ಕಚೇರಿಯಲ್ಲಿ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಶಾಸಕರು, ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಸರಕಾರಿ ಜಮೀನಿನಲ್ಲಿ ಸಾಗುವಳಿ ಮಾಡಿಕೊಂಡು ಪ್ರಸ್ತುತ ಸಾಗುವಳಿ ಸಕ್ರಮೀಕರಣಕ್ಕೆ ಅರ್ಜಿ ಹಾಕಿದ ರೈತರು ಹಾಗೂ ಸರಕಾರಿ ಜಾಗದಲ್ಲಿ ವಾಸ್ತವ್ಯದ ಉದ್ದೇಶಕ್ಕಾಗಿ ಮನೆ ಕಟ್ಟಿಕೊಂಡ ಬಡವರ ಹಲವಾರು ವರ್ಷಗಳಿಂದ ಹಕ್ಕು ಪತ್ರಕ್ಕಾಗಿ ಅರ್ಜಿ ಸಲ್ಲಿಸಿ ಈವರೆಗೂ ಹಕ್ಕು ಪತ್ರ ದೊರಕದೇ ಇರುವ ಸಮಸ್ಯೇತರ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸಲು ಜನವರಿ 2ನೇ ವಾರದಲ್ಲಿ ಕಡತ ವಿಲೇವಾರಿ ಸಪ್ತಾಹ ಆಯೋಜಿಸಲು ಸೂಚನೆ ನೀಡಿದರು.

ಬಾಕಿ ಇರುವ ಶೂನ್ಯ ಸಮಸ್ಯಾತ್ಮಕ ಎಲ್ಲಾ ಅರ್ಹ ಕಡತಗಳನ್ನು ವಿಲೇವಾರಿ ಮಾಡಿ ಹಕ್ಕುಪತ್ರ ಒದಗಿಸಲು ಕ್ರಮ ವಹಿಸಲು ಹಾಗೂ ಜನವರಿ ತಿಂಗಳ ಅಂತ್ಯದೊಳಗೆ ಎಲ್ಲಾ ಸಮಸ್ಯೇತರ ಕಡತಗಳನ್ನು ವಿಲೇವಾರಿ ಮಾಡಿ ರೈತರಿಗೆ ಹಕ್ಕು ಪತ್ರ ಒದಗಿಸಲು ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದಲ್ಲದೆ, ಜನವರಿ ಅಂತ್ಯಕ್ಕೆ ಸಮಸ್ಯಾತ್ಮಕವಲ್ಲದ ಯಾವುದೇ ಕಡತಗಳು ಬಾಕಿ ಉಳಿಯದಂತೆ ಕಂದಾಯ ಇಲಾಖೆಯ ಎಲ್ಲಾ ಸ್ತರದ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕೆಂದು ಸ್ಪಷ್ಟವಾಗಿ ಮೌಖಿಕ ಆದೇಶ ನೀಡಿದ್ದಾರೆ.

ಸಭೆಯಲ್ಲಿ ಉಪ ತಹಸೀಲ್ದಾರ್, ಕಂದಾಯ ನಿರೀಕ್ಷಕರು, ವಿಷಯ ನಿರ್ವಾಹಕರು ಹಾಗೂ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

You may also like

News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ
News

ಕ್ರೈಸ್ತ ಸಮುದಾಯದ ಕಲ್ಯಾಣಕ್ಕೆ ₹250 ಕೋಟಿ ಬಜೆಟ್ ಅನುದಾನ ಸಂಪೂರ್ಣ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಅವರಿಗೆ MLC ಐವನ್ ಡಿಸೋಜ ಮುಖಾಂತರ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು

You cannot copy content of this page