September 3, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಆಸ್ತಿ ಘೋಷಣೆ ಮಾಡದ ಆರು ಮಂದಿ ಗ್ರಾಮ ಪಂಚಾಯತ್ ಜನಪ್ರತಿನಿಧಿಗಳ ಸದಸ್ಯತ್ವ ರದ್ದುಗೊಳಿಸಿದ ಚುನಾವಣಾ ಆಯೋಗ

ಬೆಂಗಳೂರು: ಆಸ್ತಿ ಘೋಷಣೆ ಮಾಡದ ಆರು ಮಂದಿ ಗ್ರಾಮ ಪಂಚಾಯಿತಿ ಸದಸ್ಯರ ಸದಸ್ಯತ್ವವನ್ನು ರಾಜ್ಯ ಚುನಾವಣಾ ಆಯೋಗ ರದ್ದುಗೊಳಿಸಿದೆ. ಸದಸ್ಯತ್ವ ರದ್ದುಗೊಂಡ ಸದಸ್ಯ ಸ್ಥಾನಗಳನ್ನು ಖಾಲಿ ಎಂದು ಘೋಷಿಸಲಾಗಿದೆ. ಆಸ್ತಿ ವಿವರ ನೀಡುವಂತೆ ಈ ಸದಸ್ಯರಿಗೆ ನೋಟಿಸ್ ನೀಡಲಾಗಿತ್ತು. ಆದರೆ, ಯಾವುದೇ ಉತ್ತರ ನೀಡದ ಕಾರಣ ಸದಸ್ಯತ್ವ ರದ್ದು ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆ ಅತ್ತಿಕೂಡಿಗೆ ಗ್ರಾಮ ಪಂಚಾಯತ್ ನ ಚೈತ್ರ ರಘು, ಅಜ್ಜಂಪುರ ತಾಲೂಕು ಸೊಕ್ಕೆ ಗ್ರಾಮ ಪಂಚಾಯತ್ ನ ಎಸ್.ಹೆಚ್. ಚಂದ್ರಶೇಖರ, ಕಲಬುರಗಿ ಜಿಲ್ಲೆ ಆಳಂದ ತಾಲೂಕು ಅಳಂಗಾ ಗ್ರಾಮ ಪಂಚಾಯತ್ ನ ಗಣಪತಿ, ಕಮಲಾಪುರ ತಾಲೂಕು ವಿ.ಕೆ. ಸಲಗರ ಗ್ರಾಮ ಪಂಚಾಯಿತಿಯ ಇಸ್ಮಾಯಿಲ್ ಖಾನ್, ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಚಿಕ್ಕಾಂಶಿ ಹೊಸೂರು ಗ್ರಾಮ ಪಂಚಾಯಿತಿಯ ಮಂಜುಳಾ ರಾಜಪ್ಪ, ಕೊಡಗು ಜಿಲ್ಲೆ, ಮಡಿಕೇರಿ ತಾಲೂಕು ಕಳಕೇರಿ ಗ್ರಾಮ ಪಂಚಾಯಿತಿಯ ಬಿ.ವಿ. ಪ್ರಮೀಳಾ ಅವರನ್ನು ಗ್ರಾಮ ಪಂಚಾಯತಿ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ನಿಯಮಗಳಡಿ ಆಸ್ತಿ ಘೋಷಣೆ ಮಾಡಿಕೊಳ್ಳದ ಸದಸ್ಯರ ಸದಸ್ಯತ್ವ ರದ್ದತಿಗೆ ಅವಕಾಶವಿದ್ದು, ಈ ಕಾಯ್ದೆ ಬಳಸಿಕೊಂಡು ರಾಜ್ಯ ಚುನಾವಣಾ ಆಯೋಗ 6 ಮಂದಿ ಸದಸ್ಯರನ್ನು ಅನರ್ಹಗೊಳಿಸಿದೆ. ಈ ಸದಸ್ಯ ಸ್ಥಾನಗಳು ಖಾಲಿ ಎಂದು ಘೋಷಣೆ ಮಾಡಲಾಗಿದೆ.

 

You may also like

News

ಮಂಗಳೂರಿನಲ್ಲಿ ರಾಗಗಳ ರಸದೌತಣ: ಸೆಪ್ಟೆಂಬರ್ 6ರಂದು ‘ರಾಗ ಸುಧಾ’ ಸಂಗೀತ ಸಂಭ್ರಮ

ಖ್ಯಾತ ಹಿಂದೂಸ್ತಾನಿ ಗಾಯಕ ಆದಿತ್ಯ ಮೋದಕ್ ಸೇರಿದಂತೆ ರಾಷ್ಟ್ರೀಯ ಖ್ಯಾತಿಯ ಮೂವರು ಕಲಾವಿದರಿಂದ ಅಪರೂಪದ ಸಂಗೀತ ಪ್ರಸ್ತುತಿ; ಸಂಗೀತಾಸಕ್ತರಿಗೆ ಉಚಿತ ಪ್ರವೇಶ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಸುಮಧುರ
News

ಮಂಗಳೂರು ಧರ್ಮಕ್ಷೇತ್ರದ ಕಥೊಲಿಕ ಶಿಕ್ಷಣ ಮಂಡಳಿಯಿಂದ ಅದ್ದೂರಿ 37ನೇ ಶಿಕ್ಷಕರ ದಿನಾಚರಣೆ

“ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿ ಜೀವನಕ್ಕೆ ದಾರಿದೀಪ” – ಬಿಷಪ್ ಡಾ. ಪೀಟರ್ ಪಾವ್ಲ್ ವಿದ್ಯಾರ್ಥಿಯ ಜೀವನವನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಶಿಕ್ಷಕರ ಮಾರ್ಗದರ್ಶನ ಹಾಗೂ

You cannot copy content of this page