September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೇಂದ್ರ ಇಂಧನ ಖಾತೆ ಸಚಿವ ಪ್ರಹ್ಲಾದ ಜೋಶಿ ಒಡ್ಡೂರು ಫಾರ್ಮ್ಸ್ ಬಳಿ ಇರುವ ಸಿ‌.ಎನ್.ಜಿ. ಘಟಕಕ್ಕೆ ಬೇಟಿ

ಬಂಟ್ವಾಳ : ಕೇಂದ್ರ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಹ್ಲಾದ ಜೋಶಿ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಒಡ್ಡೂರು ಫಾರ್ಮ್ಸ್ ಬಳಿ ಇರುವ ಸಿ.‌ಎನ್.ಜಿ.ಘಟಕಕ್ಕೆ ಜನವರಿ 2ರಂದು ಗುರುವಾರ ಬೇಟಿ ನೀಡಿದರು.

ಘಟಕದ ಕಾರ್ಯ ಚಟುವಟಿಕೆಗಳನ್ನು ವೀಕ್ಷಿಸಿದ ಅವರು ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ  ಇಂತಹ ಪ್ರಯತ್ನಗಳು ಸಹಕಾರಿ ಆಗುತ್ತದೆ ಎಂದ ಅವರು ಘಟಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶಾಸಕ ರಾಜೇಶ್ ನಾಯ್ಕ್ ಹಾಗೂ ಉನ್ನತ್ ಆರ್. ನಾಯ್ಕ್ ಘಟಕದಲ್ಲಿ ಅಟೋ ಗ್ಯಾಸ್ ಪ್ರಾಯೋಗಿಕ ವಿತರಣೆಗೆ ಅನುಕೂಲ ಕಲ್ಪಿಸಲಾಗಿರುವ ಬಗ್ಗೆ ಮಾಹಿತಿ ನೀಡಿದರು.

‌‌ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ, ಮಂಗಳೂರು ಉತ್ತರ ಶಾಸಕ ವೈ. ಭರತ್ ಶೆಟ್ಟಿ, ಮಂಗಳೂರು ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಪ್ರಮುಖರಾದ ಸಂಜಯ್ ಪ್ರಭು, ದೇವದಾಸ್ ಶೆಟ್ಟಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಯತೀಶ್ ಅರ್ವಾರ್, ಸಚಿನ್ ಅಡಪ, ಪವನ್ ಕುಮಾರ್, ರವೀಶ್ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.

You may also like

News

ಧನಂಜಯ ವರ್ಮ ಧ್ವನಿಯಲ್ಲಿ ಗುರು ರಾಯರ ಭಕ್ತಿಯ ರಸದಾರೆ ‘ಗುರು ರಾಯರುಲ್ಲೆರ್’ ನೂತನ ಭಕ್ತಿಗೀತೆ ಬಿಡುಗಡೆ

ಮಂಗಳೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮೇಲಿನ ಭಕ್ತಿ, ಶರಣಾಗತಿ ಹಾಗೂ ಅಚಲ ನಂಬಿಕೆಯನ್ನು ಸಾರುವ ‘ಗುರು ರಾಯರುಲ್ಲೆರ್’ ಎಂಬ ನೂತನ ಭಕ್ತಿಗೀತೆ ಧನಂಜಯ ವರ್ಮ ಅವರ
News

ಕ್ರೈಸ್ತ ಸಮುದಾಯದ ಕಲ್ಯಾಣಕ್ಕೆ ₹250 ಕೋಟಿ ಬಜೆಟ್ ಅನುದಾನ ಸಂಪೂರ್ಣ ಬಿಡುಗಡೆಗೆ ಆಗ್ರಹ

ಮುಖ್ಯಮಂತ್ರಿ ಅವರಿಗೆ MLC ಐವನ್ ಡಿಸೋಜ ಮುಖಾಂತರ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಬೆಂಗಳೂರು: ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕ್ರೈಸ್ತ ಸಮುದಾಯದ ಕಲ್ಯಾಣ ಮತ್ತು

You cannot copy content of this page