ದೂರು ನೀಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ – ಡಿವೈಎಸ್‌ಪಿ ಯನ್ನು ಅಮಾನತುಗೊಳಿಸಿದ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್
ತುಮಕೂರು : ದೂರು ನೀಡಲು ಬಂದ ಮಹಿಳೆಯೊಂದಿಗೆ ಕಚೇರಿಯಲ್ಲೇ ರಾಸಲೀಲೆ ಆರೋಪ ಎದುರಿಸುತ್ತಿರುವ ಡಿವೈಎಸ್‌ಪಿ ಯವರನ್ನು ಅಮಾನತು ಮಾಡಲಾಗಿದೆ. ಡಿವೈಎಸ್‌ಪಿ ತಮ್ಮ ಕಚೇರಿಗೆ ದೂರು ನೀಡಲು ಬಂದ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಎದುರಿಸುತ್ತಿದ್ದ ಹಿನ್ನೆಲೆಯಲ್ಲಿ ಮಧುಗಿರಿಯ ಡಿವೈಎಸ್‌ಪಿ ಯಾಗಿದ್ದ ಎ. ರಾಮಚಂದ್ರಪ್ಪ ಅವರನ್ನು ಇಂದು ಜನವರಿ 3ರಂದು ಶುಕ್ರವಾರ ಅಮಾನತು ಮಾಡಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ವರದಿ ಸಲ್ಲಿಸಿದ್ದರು. ಈ ವರದಿಯ ಆಧಾರದ ಮೇಲೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ರವರು ಡಿವೈಎಸ್‌ಪಿ ಯನ್ನು ತಕ್ಷಣದಿಂದಲೇ ಅಮಾನತು ಮಾಡಿದ ಆದೇಶ ಹೊರಡಿಸಿದ್ದಾರೆ.