ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ
ಉಜಿರೆ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಹೈಯರ್ ಗ್ರೇಡ್ ಡ್ರಾಯಿಂಗ್ ಪರೀಕ್ಷೆಯಲ್ಲಿ ಅನುಗ್ರಹ ಇಂಗ್ಲೀಷ್ ಮೀಡಿಯಂ ಸ್ಕೂಲ್ ಉಜಿರೆ ಇಲ್ಲಿಯ 20 ಮಕ್ಕಳು ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ 100% ಫಲಿತಾಂಶ ಪಡೆದಿದೆ. ನವ್ಯ 74%, ಶ್ರೇಯ 70% ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ. ಇವರನ್ನು ಶಾಲೆಯ ಚಿತ್ರಕಲಾ ಶಿಕ್ಷಕಿಯಾದ ಸುಮನ ಇವರು ತರಬೇತಿ ನೀಡಿರುತ್ತಾರೆ.
ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕರಾದ ವಂದನೀಯ ಫಾದರ್ ಅಬೆಲ್ ಲೋಬೊ, ಪ್ರಾಂಶುಪಾಲರಾದ ವಂದನೀಯ ಫಾದರ್ ವಿಜಯ್ ಲೋಬೊರವರು ಅಭಿನಂದಿಸಿರುತ್ತಾರೆ.