ಇಂದು ಗೌರವಾನ್ವಿತ ಉಪರಾಷ್ಟ್ರಪತಿಗಳು ಧರ್ಮಸ್ಥಳಕ್ಕೆ
ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಜಗದೀಪ್ ಧನ್ಕರ್ ರವರು ಇಂದು ಜನವರಿ 7ರಂದು ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಇಂದು ಬೆಳಗ್ಗೆ ದೆಹಲಿಯಿಂದ ಹೊರಟು ಮಧ್ಯಾಹ್ನ 1.05 ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ತೆರಳಿ 1.45 ಕ್ಕೆ ಧರ್ಮಸ್ಥಳ ಹೆಲಿಪ್ಯಾಡ್‍ಗೆ ಆಗಮನ. 2 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ದರ್ಶನ, 2 ಗಂಟೆಯಿಂದ ಧರ್ಮಸ್ಥಳದಲ್ಲಿ ಮೆಗಾ ಕ್ಯೂ ಕಾಂಪ್ಲೆಕ್ಸ್ ಉದ್ಘಾಟನೆ ಮಾಡಲಿದ್ದಾರೆ ಮತ್ತು 2024-25 ಜ್ಞಾನದೀಪ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. 3.15 ಕ್ಕೆ ಹೆಲಿಪ್ಯಾಡ್‍ನಿಂದ ನಿರ್ಗಮಿಸಲಿದ್ದಾರೆ. 3-50 ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ದೆಹಲಿಗೆ ಉಪರಾಷ್ಟ್ರಪತಿಗಳು ತೆರಳಲಿದ್ದಾರೆ.