ಮುಮ್ತಾಝ್ ಆಲಿ ಪ್ರಕರಣದಲ್ಲಿ 6 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಪೊಲೀಸರು
ಮಂಗಳೂರು : ಉದ್ಯಮಿ ಮುಮ್ತಾಝ್ ಆಲಿ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 6 ಮಂದಿ ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಜನವರಿ 6ರಂದು ಸೋಮವಾರ ಸಂಜೆ ಮಂಗಳೂರಿನ ಜೆಎಂಎಫ್ ಸಿ ನ್ಯಾಯಲಯಕ್ಕೆ 600ಕ್ಕೂ ಅಧಿಕ ಪುಟಗಳ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಪ್ರಮುಖ ಆರೋಪಿ ಎನ್ನಲಾದ ಸುರತ್ಕಲ್ ಕೃಷ್ಣಾಪುರ ಏಳನೇ ಬ್ಲಾಕ್ ನಿವಾಸಿ ರಹ್ಮತ್ ಮತ್ತು ಆಕೆಯ ಪತಿ ಪ್ರಕರಣದ ಐದನೇ ಆರೋಪಿ ಶುಐಬ್, ಎ2 ಆರೋಪಿ ಅಬ್ದುಲ್ ಸತ್ತಾರ್, ಎ3 ಆರೋಪಿ ನಂದಾವರ ನಿವಾಸಿ ಕಲಂದರ್ ಶಾಫಿ, ಎ4 ಆರೋಪಿ ಕೃಷ್ಣಾಪುರ ನಿವಾಸಿ ಮುಸ್ತಫ ಹಾಗೂ ಆರನೇ ಆರೋಪಿ ಸತ್ತಾರ್ ನ ಕಾರು ಚಾಲಕ ಸಿರಾಜ್ ಎಂಬವರ ವಿರುದ್ಧ ಪ್ರಕರಣದ ತನಿಖಾಧಿಕಾರಿಯಾಗಿರುವ ಸುರತ್ಕಲ್ ಪೊಲೀಸ್ ಠಾಣೆಯ ನಿರೀಕ್ಷಕ ಮಹೇಶ್ ಪ್ರಸಾದ್ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.