ಮಿತ್ತಬೈಲ್ ಕೇಂದ್ರ ಜುಮಾ ಮಸೀದಿ ಮಾಜಿ ಅಧ್ಯಕ್ಷ ಹಬೀಬುಲ್ಲಾ ನಿಧನ
ಬಂಟ್ವಾಳ : ಬಿ.ಸಿ. ರೋಡ್ ಸಮೀಪದ ಕೈಕಂಬ ನಿವಾಸಿ 64 ವರ್ಷ ಪ್ರಾಯದ ಹಬೀಬುಲ್ಲಾ ಅಲ್ಪಕಾಲದ ಅನಾರೋಗ್ಯದಿಂದ ಜನವರಿ 7ರಿಂದ ಬುಧವಾರ ಬೆಳಗ್ಗೆ ನಿಧನರಾದರು. ಮಿತ್ತಬೈಲ್ ಕೇಂದ್ರ ಜುಮಾ ಮಸೀದಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು ಹಲವಾರು ಧಾರ್ಮಿಕ ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದರು.
ಮೃತರು ಪತ್ನಿ ಇಬ್ಬರು ಪುತ್ರರು ಮೂವರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೃತದೇಹ ಕೈಕಂಬ – ಶಾಂತಿಅಂಗಡಿ ಮನೆಯಲ್ಲಿದ್ದು ಸಂಜೆ ವೇಳೆ ಮಿತ್ತಬೈಲ್ ನಲ್ಲಿ ದಫನ ಕಾರ್ಯ ನಡೆಯಲಿದೆ ಎಂದು ಕುಟುಂಬಿಕರು ತಿಳಿಸಿದ್ದಾರೆ.