May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮೂಳೆ ಸಾಂದ್ರತೆ ತಪಾಸಣೆ ಅತೀ ಅಗತ್ಯ – ಡಾ. ಗೋಪಾಲಕೃಷ್ಣ

ಉಜಿರೆ : ಮೂಳೆ ಸಾಂದ್ರತೆ ಪರೀಕ್ಷೆ ಮಾಡಿಸಿಕೊಳ್ಳುವ ಸಂಭವನೀಯ ಅಪಾಯವನ್ನು ತಡೆಗಟ್ಟಬಹುದು ಎಂದು ಉಜಿರೆ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ಅಭಿಪ್ರಾಯಪಟ್ಟರು.  ಡಾ. ಗೋಪಾಲಕೃಷ್ಣ ಬೆನಕ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರವನ್ನು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸುತ್ತಾ ಮಾತನಾಡುತ್ತಿದ್ದರು. ಮೂಳೆ ಸಾಂದ್ರತೆ ಪರೀಕ್ಷೆಯನ್ನು ಮೂಳೆ ಖನಿಜಾಂಶ ಮತ್ತು ಸಾಂದ್ರತೆಯನ್ನು ಅಳೆಯಲು ಬಳಸಲಾಗುತ್ತದೆ.

ಮೂಳೆ ಸಾಂದ್ರತೆಯ ಪರೀಕ್ಷೆಯನ್ನು ಮುಖ್ಯವಾಗಿ ತೆಳುವಾದ, ದುರ್ಬಲ ಮೂಳೆಗಳು ಮತ್ತು ಕಡಿಮೆ ಮೂಳೆ ದ್ರವ್ಯರಾಶಿಯ ಸಮಸ್ಯೆಯನ್ನು ನೋಡಲು ಮಾಡಲಾಗುತ್ತದೆ. ಈ ಸಮಸ್ಯೆಗಳಿಗೆ ಸಾಧ್ಯವಾದಷ್ಟು ಬೇಗ ಚಿಕಿತ್ಸೆ ನೀಡಬೇಕು. ಆರಂಭಿಕ ಚಿಕಿತ್ಸೆಯು ಮೂಳೆ ಮುರಿತಗಳನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ಎಲುಬು ಮತ್ತು ಕೀಲು ಶಾಸ್ತ್ರ ಚಿಕಿತ್ಸಾ ತಜ್ಞ ಡಾ. ರೋಹಿತ್ ಜಿ. ಭಟ್ ತಿಳಿಸಿದರು.

ಡಾ. ಅಂಕಿತಾ ಜಿ. ಭಟ್ ಪ್ರಾರ್ಥಿಸಿ, ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್.ಜಿ. ಭಟ್  ಸ್ವಾಗತಿಸಿದರು. ಪ್ರಧಾನ ವ್ಯವಸ್ಥಾಪಕ ದೇವಸ್ಯ ಕಾರ್ಯಕ್ರಮ ನಿರ್ವಹಿಸಿದರು. ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಾರ್ವನಿಕರು ಭಾಗವಹಿಸಿದ್ದರು. ಈ ಶಿಬಿರದಲ್ಲಿ ಸುಮಾರು 120 ಜನ ಪಾಲ್ಗೊಂಡು ತಮ್ಮ ಮೂಳೆ ತಪಾಸಣೆ ಮಾಡಿಸಿಕೊಂಡು ಸೂಕ್ತ ಸಲಹೆ ಸೂಚನೆಗಳನ್ನು ಪಡೆದರು.  ಡಾ. ಭಾರತಿ ಜಿ.ಕೆ. ವಂದಿಸಿದರು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page