ರಾಜ್ಯ ಮಟ್ಟದ ತ್ರೋಬಾಲ್ ಸ್ಪರ್ಧೆಯಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಗೆ ದ್ವಿತೀಯ ಸ್ಥಾನ
ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೋಲಾರ ಜಿಲ್ಲೆಯ ಕೆಜಿಎಫ್ ಪ್ರೌಢ ಶಾಲೆಯಲ್ಲಿ ಜನವರಿ 8 ಮತ್ತು 9ರಂದು ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.
ತಂಡದಲ್ಲಿ ಆದ್ಯ ಕೆ., ಶಾನ್ವಿ ಪ್ರೀಷ್ಮ, ಫಾತಿಮಾತ್ ಮುನವರ, ಫಾತಿಮಾತ್ ಝುಲ್ಫ, ನಿರೀಕ್ಷಾ ಎಚ್. ಶೆಟ್ಟಿ, ಸ್ನಿಗ್ಧ, ಆಯಿಷಾತ್ ಹಿಬಾ ಉತ್ತಮ ಪ್ರದರ್ಶನವನ್ನು ನೀಡಿ ಗೆಲುವಿಗೆ ಪಾತ್ರರಾದರು. ಹಿಬಾ ಉತ್ತಮ ಆಟಗಾರ್ತಿಯಾಗಿ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು. ತಂಡಕ್ಕೆ ದೈಹಿಕ ಶಿಕ್ಷಕರಾದ ನಿರಂಜನ್ ಹಾಗೂ ಅಕ್ಷಯ್ ಇವರು ತರಬೇತಿಯನ್ನು ನೀಡಿರುತ್ತಾರೆ. ತಂಡದ ವ್ಯವಸ್ಥಾಪಕಿ ಅನಿತಾ ಸಿಯ ಗೊನ್ಸಾಲ್ವಿಸ್ ಇವರು ತಂಡವನ್ನು ಮುನ್ನಡೆಸಿದರು ಎಂಬುದಾಗಿ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಸೆಲಿನ್ ಪೇತ್ರರವರು ತಿಳಿಸಿರುತ್ತಾರೆ.