September 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ಮತ್ತು ಉಡುಪಿಯಲ್ಲಿ ನಡೆಯಲಿರುವ ‘ಕನಾ೯ಟಕ ಕ್ರೀಡಾಕೂಟ – 2025’ ಯಶಸ್ಸಿಗೆ ಕೈ ಜೋಡಿಸಲು ಜಿಲ್ಲಾಧಿಕಾರಿ ಕರೆ

ಮಂಗಳೂರು : ಜನವರಿ 17 ರಿಂದ 23ರ ತನಕ ನಡೆಯಲಿರುವ ಕರ್ನಾಟಕ ಕ್ರೀಡಾಕೂಟದಲ್ಲಿ ಒಟ್ಟು 25 ವಿವಿಧ ಕ್ರೀಡೆಗಳಲ್ಲಿ ಸ್ಪರ್ಧೆಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ತಿಳಿಸಿದರು.

ಅವರು ಜನವರಿ 11ರಂದು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ -2025ರ ಅಂಗವಾಗಿ ವಿವಿಧ ಶಿಕ್ಷಣ ಸಂಸ್ಥೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 3247 ಕ್ರೀಡಾಪಟುಗಳು ಹಾಗೂ 599 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರ ತಂಡ ಸೇರಿದಂತೆ ಒಟ್ಟು 4250 ಜನ ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು. ಜನವರಿ 17ರಂದು ಸಂಜೆ 5 ಗಂಟೆಗೆ ನಗರದ ಮಂಗಳ ಕ್ರೀಡಾಂಗಣದಲ್ಲಿ ಕರ್ನಾಟಕ ಕ್ರೀಡಾಕೂಟ – 2025 ರ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದರು.

ಮಂಗಳೂರಿನಲ್ಲಿ ಬ್ಯಾಡ್ಮಿಂಟನ್ ಬಾಸ್ಕೆಟ್ ಬಾಲ್, ಪೆನ್ಸಿಂಗ್, ಫುಟ್ಬಾಲ್, ಹ್ಯಾಂಡ್ ಬಾಲ್, ಕೋಕೋ, ನೆಟ್ ಬಾಲ್, ಈಜು, ಟೇಕ್ವಾಂಡೋ, ವಾಲಿಬಾಲ್, ವೈಟ್ ಲಿಫ್ಟಿಂಗ್ ಹಾಗೂ ವುಶು ಒಟ್ಟು 12 ಕ್ರೀಡೆಗಳನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು. ಪ್ರತಿಯೊಂದು ಕ್ರೀಡೆಯಲ್ಲಿ ಪುರುಷರು ಮತ್ತು ಮಹಿಳಾ ವಿಭಾಗದಲ್ಲಿ ಪ್ರತ್ಯೇಕ ಸ್ಪರ್ಧೆ ನಡೆಯಲಿದೆ.  ಕ್ರೀಡೆಯಲ್ಲಿ ಹಲವು ವಿಭಾಗಗಳಲ್ಲಿ ಒಟ್ಟು 631 ಚಿನ್ನದ ಪದಕ, 631 ಬೆಳ್ಳಿ ಪದಕ ಮತ್ತು 827 ಕಂಚಿನ ಪದಕಗಳಿಗಾಗಿ ಕ್ರೀಡಾಪಟುಗಳ ಸ್ಪರ್ಧೆ ನಡೆಯಲಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಜಿ., ಜಿಲ್ಲಾ ಪಂಚಾಯತ್  ಸಿಇಒ  ಡಾ. ಆನಂದ್ ಕೆ., ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಹಾಗೂ ಬ್ಯಾರಿ ಸಾಹಿತ್ಯ ಅಕಾಡಮಿ ಅಧ್ಯಕ್ಷ  ಉಪಸ್ಥಿತರಿದ್ದರು.

 

You may also like

News

ಕಲ್ಲುಗುಂಡಿ ದರೋಡೆ ಪ್ರಕರಣದಲ್ಲಿ ಶ್ರೀನಿವಾಸ ದೋಷಮುಕ್ತ

ಆರೋಪಿ ಪರ ಪ್ರಖ್ಯಾತ ವಕೀಲರಾದ ಪುತ್ತೂರು ಮಹೇಶ್ ಕಜೆ ಯಶಸ್ವಿ ವಾದ ಪುತ್ತೂರು: ಸುಮಾರು 13 ವರ್ಷಗಳ ಹಿಂದೆ ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಕಲ್ಲುಗುಂಡಿ ಎಂಬಲ್ಲಿ
News

ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಶಾಂತಿಗೆ ಭಂಗ – ಮೂವರ ವಿರುದ್ಧ ಎಫ್‌ಐಆರ್ ದಾಖಲು

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿ, ಸಾರ್ವಜನಿಕ ಶಾಂತಿಗೆ ಭಂಗ ತಂದಿರುವ ಘಟನೆಗೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ

You cannot copy content of this page