January 13, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಿಸ್ತಾ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಬಾಲಕನ ದಾರುಣ ಸಾವು

ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗುವೊಂದು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆ ಎಂಬಲ್ಲಿ ಜನವರಿ 11ರಂದು ಶನಿವಾರ ಸಂಜೆ ಈ ಘಟನೆ ನಡೆದಿದೆ. ಮೃತಪಟ್ಟ ಮಗುವನ್ನು ಕುಂಬಳೆ ಭಾಸ್ಕರ ನಗರದ ನಿವಾಸಿ ಅನ್ವರ್- ಮೆಹರೂಫಾ ದಂಪತಿ ಪುತ್ರ ಅನಸ್ ಎಂದು ಗುರುತಿಸಲಾಗಿದೆ. ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿದ್ದು, ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆದಿದ್ದರು.

ಬಳಿಕ ಬಾಲಕನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ವೈದ್ಯರು ತಪಾಸಣೆ ನಡೆಸಿದಾಗ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದು ತಿಳಿಸಿದ್ದರಿಂದ ಮನೆಗೆ ಕರೆದುಕೊಂಡು ಬರಲಾಗಿತ್ತು ಎಂದು ತಿಳಿದುಬಂದಿದೆ.  ಆದರೆ, ಜನವರಿ 12ರಂದು ಭಾನುವಾರ ಬೆಳಗ್ಗೆ ಬಾಲಕನಿಗೆ ಉಸಿರಾಟದ ತೊಂದರೆ ಉಂಟಾಗಿದೆ. ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ. ಬಾಕಿಯುಳಿದಿದ್ದ ಪಿಸ್ತಾದ ಸಿಪ್ಪೆ ಶ್ವಾಸಕೋಶದಲ್ಲಿ ಉಳಿದಿದ್ದರಿಂದಾಗಿ ಮಗು ಉಸಿರಾಟದ ಸಮಸ್ಯೆಗೆ ತುತ್ತಾಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ವಿದೇಶದಲ್ಲಿರುವ ಮಗುವಿನ ತಂದೆ ಅನ್ವರ್ ಅವರು ಕಳೆದ ವಾರವಷ್ಟೇ ರಜೆಯಲ್ಲಿ ಊರಿಗೆ ಬಂದಿದ್ದು, ರಜೆ ಮುಗಿದ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆಯಷ್ಟೇ ಮತ್ತೆ ವಿದೇಶಕ್ಕೆ ತೆರಳಿದ್ದರು.

 

You may also like

News

ಮೂಡುಬಿದಿರೆಯಲ್ಲಿ 85ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ಭವ್ಯ ಚಾಲನೆ

ಸಮಗ್ರ ಸಂಸ್ಕೃತಿಯ ಸಾರ ಆಳ್ವಾಸ್‌ನಲ್ಲಿ – ವಿಧಾನಸಭಾ ಸಭಾಪತಿ ಯು.ಟಿ. ಖಾದರ್ ಮೊದಲ ದಿನವೇ ಚಿನ್ನ ಮುಡಿಗೇರಿಸಿದ ಆಳ್ವಾಸ್ ವಿದ್ಯಾರ್ಥಿನಿ ನಿರ್ಮಲಾ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ
News

ಜನವರಿ 16ರಿಂದ 25ರವರೆಗೆ ಕಾಜೂರು ಮಖಾಂ ಉರೂಸ್ – ಪೊಲೀಸ್ ಇಲಾಖೆ ಜೊತೆ ಶಾಂತಿ–ಸಮನ್ವಯ ಸಭೆ

ಇತಿಹಾಸ ಪ್ರಸಿದ್ಧ ಕಾಜೂರು ಮಖಾಂ ಉರೂಸ್ ಕಾರ್ಯಕ್ರಮವು ಜನವರಿ 16ರಿಂದ 25ರವರೆಗೆ ನಡೆಯಲಿದ್ದು, ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜನವರಿ 9ರಂದು ಶುಕ್ರವಾರ ಪೊಲೀಸ್

You cannot copy content of this page