February 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪೆರುವಾಜೆ ಜನವರಿ 16ರಿಂದ‌ 21ರ ತನಕ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಪೆರುವಾಜೆ :  ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ  ಬ್ರಹ್ಮರಥೋತ್ಸವವು ಜನವರಿ 16ರಿಂದ‌ 21ರ ತನಕ  ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ಜನವರಿ 16 – ಹಸುರು ಹೊರೆಕಾಣಿಕೆ ಮೆರವಣಿಗೆ : ಬೆಳಗ್ಗೆ 10 ಗಂಟೆಗೆ ಜಾತ್ರೆಯ ಉಗ್ರಾಣ ಮುಹೂರ್ತ, ಮಹಾಪೂಜೆ, ಪ್ರಸಾದ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ‌ 3 ಗಂಟೆಗೆ ಬೆಳ್ಳಾರೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯದ ಬಳಿಯಿಂದ‌ ಹಸುರು‌ ಹೊರೆಕಾಣಿಕೆ ‌ಮೆರವಣಿಗೆ, ರಾತ್ರಿ 7ಕ್ಕೆ ದೇವತಾ ಪ್ರಾರ್ಥನೆ, ಧ್ವಜಾರೋಹಣ ನಡೆಯಲಿದೆ. ನಂತರ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ, ಮಹಾಪೂಜೆ,ಶ್ರೀ ಭೂತ ಬಲಿ ನಡೆಯಲಿದೆ.

ಜನವರಿ 17 – ಪೇಟೆ ಸವಾರಿ : ಬೆಳಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ. ಮದ್ಯಾಹ್ನ 12ಕ್ಕೆ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 5ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ, ಪೇಟೆ ಸವಾರಿ,ಮಹಾಪೂಜೆ,ಶ್ರೀ ಭೂತ ಬಲಿ ನಡೆಯಲಿದೆ.

ಜನವರಿ 18 – ದೀಪೋತ್ಸವ, ಪಲ್ಲಕ್ಕಿ ಉತ್ಸವ : ಬೆಳಗ್ಗೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ. ಶ್ರೀ ಉಳ್ಳಾಕುಲು ದೈವದ ಭಂಡಾರ ಬರುವುದು, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ, ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ ಗಂಟೆ 7.00ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ದೀಪೋತ್ಸವ, ಪಲ್ಲಕ್ಕಿ ಉತ್ಸವ, ವಸಂತ ಕಟ್ಟೆ ಪೂಜೆ, ನೃತ್ಯ ಬಲಿ, ಮಹಾಪೂಜೆ, ಶ್ರೀ ಭೂತಬಲಿ ನಡೆಯಲಿದೆ. ರಾತ್ರಿ 8ಕ್ಕೆ ಪಾವಂಜೆ ಮೇಳದವರಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಬಾರತವರ್ಷಿಣಿ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.

ಜನವರಿ 19 – ಬ್ರಹ್ಮರಥೋತ್ಸವ, ಪೆರುವಾಜೆ ಬೆಡಿ ಪ್ರದರ್ಶನ : ಬೆಳಗ್ಗೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ. ಮಧ್ಯಾಹ್ನ 12ಕ್ಕೆ ಶ್ರೀ ದೇವರಿಗೆ ಕಲಶಾಭಿಷೇಕ, ಪಲ್ಲಕ್ಕಿ ಉತ್ಸವ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ 7ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ, ವ್ಯಾಘ್ರಚಾಮುಂಡಿ ದೈವ (ಪಿಲಿಭೂತ)ದ ಭಂಡಾರ ಬರುವುದು. ಅನಂತರ ಬ್ರಹ್ಮರಥೋತ್ಸವ, ಪೆರುವಾಜೆ ಬೆಡಿ ಪ್ರದರ್ಶನ ನಡೆಯಲಿದೆ. ಆ ಬಳಿಕ ಮಹಾಪೂಜೆ, ಶಯನೋತ್ಸವ, ಕವಾಟ ಬಂಧನ ನಡೆಯಲಿದೆ.

ಜನವರಿ 20 – ಶ್ರೀ ದೇವರ ಅವಭೃತ : ಬೆಳಗ್ಗೆ 7ಕ್ಕೆ ಕವಾಟೋದ್ಘಾಟನೆ, ಶ್ರ್ರೀ ದೇವರಿಗೆ ತೈಲಾಭಿಷೇಕ, ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ ತುಲಾಭಾರ ಸೇವೆ, ಯಾತ್ರಾ ಹೋಮ, ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ 7ಕ್ಕೆ ಶ್ರೀ ದೇವರ ಬಲಿ ಹೊರಟು ಕಟ್ಟೆಪೂಜೆ, ಅವಭೃತ ಸ್ನಾನ ಧ್ವಜಾವರೋಹಣ, ಮಹಾಪೂಜೆ, ಪ್ರಸಾದ ವಿತರಣೆ ನಂತರ ಉಳ್ಳಾಕುಲು, ಮೈಷಂತಾಯ, ಶ್ರೀ ವ್ಯಾಘ್ರಚಾಮುಂಡಿ ದೈವದ ಭಂಡಾರ ತೆಗೆಯುವುದು.

ಜನವರಿ 21 – ದೈವಗಳ ನೇಮ : ಬೆಳಿಗ್ಗೆ ಮಹಾಗಣಪತಿ ಹೋಮ, ಕಲಶ ಪೂಜೆ,  ಶ್ರೀ ಉಳ್ಳಾಕುಲು ಮತ್ತು ಮೈಷಂತಾಯ ದೈವಗಳ ನೇಮೋತ್ಸವ, ಪ್ರಸಾದ ವಿತರಣೆ ನಡೆಯಲಿರುವುದು. ಮದ್ಯಾಹ್ನ ಶ್ರೀ ದೇವರಿಗೆ ಸಂಪ್ರೋಕ್ಷಣೆ, ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆಯಲಿರುವುದು. ಮಧ್ಯಾಹ್ನ ಶ್ರೀ ವ್ಯಾಘ್ರಚಾಮುಂಡಿ ದೈವದ ನೇಮೋತ್ಸವ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 7ಕ್ಕೆ ಶ್ರೀ ಕಲ್ಲುರ್ಟಿ, ಕಲ್ಕುಡ ದೈವದ ನೇಮೋತ್ಸವ ನಡೆಯಲಿದೆ. ಪ್ರತೀ ದಿನ ಬೆಳಿಗ್ಗೆ ಮತ್ತು ಸಂಜೆ ವಿವಿಧ ಭಜನ ಮಂಡಳಿಗಳಿಂದ ಭಜನಾ ಸಂಕೀರ್ತನೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ತಿಳಿಸಿದ್ದಾರೆ.

You may also like

News

ಪ್ರಸಿದ್ದ ಚಲನಚಿತ್ರ ನಟ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚೇತನ್ ರೈ ಮಾಣಿ ಇವರ ಮಗಳು ವೆನ್ಯ ರೈ ನಾಯಕಿಯಾಗಿ ನಟಿಸಿದ ‘ಆರಾಟ’ ಕನ್ನಡ ಸಿನಿಮಾ 16ನೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಗೆ ಆಯ್ಕೆ

ಬೆಂಗಳೂರಿನಲ್ಲಿ ಮಾರ್ಚ್ 1ರಿಂದ 8ರ ತನಕ ನಡೆಯಲಿರುವ 16ನೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಗೆ ಪ್ರಸಿದ್ದ ಚಲನಚಿತ್ರ ನಟ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚೇತನ್
News

 ಗೆಳೆಯರ ಬಳಗ ಕಲ್ಮಂಜ ಇದರ ರಜತ ಸಂಭ್ರಮ ಕಾರ್ಯಕ್ರಮ

ಗೆಳೆಯರ ಬಳಗ ಅಕ್ಷಯನಗರ (ರಿ.) ನಿಡಿಗಲ್ ಕಲ್ಮಂಜ ಇದರ ರಜತ ಸಂಭ್ರಮ ಕಾರ್ಯಕ್ರಮವು ಫೆಬ್ರವರಿ 9ರಂದು ಆದಿತ್ಯವಾರ ಕಲ್ಮಂಜ ಗ್ರಾಮದ ಅಕ್ಷಯನಗರದ ಕ್ರೀಡಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು.

You cannot copy content of this page