February 13, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶಿಕ್ಷಕಿಯೊಂದಿಗೆ ಹೆಡ್‌ ಮಾಸ್ಟರ್‌ ಶಾಲಾ ಕಚೇರಿಯಲ್ಲೇ ರೊಮ್ಯಾನ್ಸ್

ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ದಾರಿದೀಪವಾಗಬೇಕಿದ್ದ ಶಿಕ್ಷಕರೇ ನಾಚಿಕೆಗೇಡಿನ ಕೃತ್ಯ ಎಸಗಿದ್ದಾರೆ. ಶಾಲಾ ಕಚೇರಿಯಲ್ಲಿ ಹೆಡ್‌ ಮಾಸ್ಟರ್‌ ಶಿಕ್ಷಕಿಯೊಂದಿಗೆ ಸರಸ ಸಲ್ಲಾಪದ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದೆ. ಶಾಲೆಯಲ್ಲಿ ಹೇಯ ಕೃತ್ಯ ಎಸಗಿದ ಶಿಕ್ಷಕರಿಬ್ಬರ ನಡೆಗೆ ಇದೀಗ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಘಟನೆ ರಾಜಸ್ಥಾನದ ಚಿತ್ತೋರ್‌ಗಢ ಜಿಲ್ಲೆಯಲ್ಲಿ ನಡೆದಿದ್ದು, ಇಲ್ಲಿನ ಗಂಗ್ರಾರ್ ಬ್ಲಾಕ್‌ನ ಸಲೇರಾ ಎಂಬಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೆಡ್‌ ಮಾಸ್ಟರ್‌ ಮತ್ತು ಲೇಡಿ ಟೀಚರ್‌ ಕರ್ತವ್ಯ ಪ್ರಜ್ಞೆಯನ್ನು ಮರೆತು ರೊಮ್ಯಾನ್ಸ್‌ ಮಾಡಿದ್ದಾರೆ. ಮುಖ್ಯ ಶಿಕ್ಷಕರ ಕೊಠಡಿಯಲ್ಲಿ ಈ ಇಬ್ಬರು ಮುದ್ದಾಡುತ್ತಾ ಸರಸ ಸಲ್ಲಾಪದಲ್ಲಿ ತೊಡಗಿದ್ದು, ಈ ದೃಶ್ಯ ಅಲ್ಲಿದ್ದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ದೃಶ್ಯವನ್ನು ಯಾರೋ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದು, ವಿದ್ಯಾ ದೇಗುಲದಲ್ಲಿ ನಾಚಿಕೆಗೇಡಿನ ವರ್ತನೆಯನ್ನು ತೋರಿದ ಈ ಇಬ್ಬರೂ ಶಿಕ್ಷಕರನ್ನು ಅಮಾನತು ಮಾಡುವಂತೆ ಆಗ್ರಹಿಸಲಾಗಿದೆ.

ಜನವರಿ 19ರಂದು ಹಂಚಿಕೊಳ್ಳಲಾದ ಈ ವಿಡಿಯೋ ವೀಕ್ಷಣೆ ಬಳಿಕ  ಸಾರ್ವಜನಿಕರ ಆಕ್ರೋಶಕ್ಕೆ ಕಾರಣಾವಾಗಿದೆ. ಇಂತಹ ದೃಶ್ಯಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹರಿ ಬಿಡುವುದು ತಪ್ಪುʼ ಎಂದು ಕೆಲವರು ಹೇಳಿದರೆ, ಇನ್ನು ಕೆಲವರು  ʼಈ ಇಬ್ಬರನ್ನೂ ಮೊದಲು ವಜಾ ಗೊಳಿಸಬೇಕುʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಶಿಕ್ಷಕರಿಬ್ಬರ ಈ ನಾಚಿಕೆಗೇಡಿನ ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

You may also like

News

ಕಥೊಲಿಕ್ ಸಭಾ ಸುರತ್ಕಲ್ ವಲಯದ ದಶಮಾನೋತ್ಸವ ಸಂಭ್ರಮ

ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣ – ವೆಲೆಂಟೈನ್ ಡಿಸೋಜ ನಿವೃತ್ತ DSP   ಸುರತ್ಕಲ್ ಇಲ್ಲಿನ ಸೆಕ್ರೆಡ್ ಹಾರ್ಟ್ ಚರ್ಚ್ ಸಭಾಂಗಣದಲ್ಲಿ ಫೆಬ್ರವರಿ 8ರಂದು ಭಾನುವಾರ ಕಥೊಲಿಕ್
News

ಕಾಸರಗೋಡು ನಗರಸಭೆಯ 9ನೇ ವಾರ್ಡ್ ಸಭೆ ಯಶಸ್ವಿ

ಮಾದರಿ ನಗರಸಭೆ ನಿರ್ಮಾಣಕ್ಕೆ ನಗರಸಭಾ ಅಧ್ಯಕ್ಷೆ ಶಾಹಿನಾ ಸಲೀಂ ಸಂಕಲ್ಪ ಕಾಸರಗೋಡು ನಗರಸಭೆಯ 2026–27ನೇ ವಾರ್ಷಿಕ ಯೋಜನೆ ರೂಪಿಕರಣದ ಅಂಗವಾಗಿ 9ನೇ ವಾರ್ಡ್‌ನ ನುಳ್ಳಿಪಾಡಿ (ಅಣಂಗೂರು, ಜೆ.ಪಿ.

You cannot copy content of this page