May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಹಾಭಾರತ ಸರಣಿಯಲ್ಲಿ ಮಧ್ಯಮ ವ್ಯಾಯೋಗ ತಾಳಮದ್ದಳೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 61ನೇ ತಾಳಮದ್ದಳೆ ಮಧ್ಯಮ ವ್ಯಾಯೋಗ ಜರಗಿತು.

ಭಾಗವತರಾಗಿ ಪದ್ಮನಾಭ ಕುಲಾಲ್, ಸುರೇಶ ರಾವ್. ಬಿ., ಹರೀಶ ಆಚಾರ್ಯ ಬಾರ್ಯ ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಅರ್ಥಧಾರಿಗಳಾಗಿ ಜಯರಾಮ ಬಲ್ಯ (ಭೀಮ) ಹರೀಶ ಆಚಾರ್ಯ ಬಾರ್ಯ (ಧರ್ಮರಾಯ)  ಪೂರ್ಣಿಮ ರಾವ್ ಬೆಳ್ತಂಗಡಿ (ಕೇಶವ ದಾಸ) ದಿವಾಕರ ಆಚಾರ್ಯ ಗೇರುಕಟ್ಟೆ (ಕೇಶವ ದಾಸನ ಪತ್ನಿ) ಪುಷ್ಪಾ ತಿಲಕ್ (ಹಿಡಿಂಬಾ) ಶ್ರುತಿ ವಿಸ್ಮಿತ್ (ಘಟೋತ್ಕಚ) ಶ್ರೀಧರ ಎಸ್ಪಿ ಸುರತ್ಕಲ್ (ಮಧ್ಯಮ)ಭಾಗವಹಿಸಿದ್ದರು. ಗೋಪಾಲ್ ಶೆಟ್ಟಿ ಕಳಿಂಜ ಕಾರ್ಯಕ್ರಮದ ಪ್ರಾಯೋಜಕರಾಗಿದ್ದರು.

ಶ್ರದ್ಧಾಂಜಲಿ ಅರ್ಪಣೆ ಸಂಘದ ರಜತ ಮಹೋತ್ಸವದ ಖಜಾಂಚಿಯಾಗಿ ಕರ್ತವ್ಯ ನಿರ್ವಹಿಸಿದ್ದ ಉದ್ಯಮಿ ಮೋಹನದಾಸ ಕಿಣಿ ಉಪ್ಪಿನಂಗಡಿ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಭರತನಾಟ್ಯ ಗುರು, ಯಕ್ಷಗಾನ ಪೋಷಕ ಪಿ. ಕಮಲಾಕ್ಷ ಆಚಾರ್ಯ ಬೆಳ್ತಂಗಡಿ ಇವರ ನಿಧನಕ್ಕೆ ಸಂತಾಪ ಸೂಚಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page