ಮಂಗಳೂರಿನ ಉಳ್ಳಾಲದ ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ – ಮೂವರು ಆರೋಪಿಗಳ ಬಂಧನ

ಮಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಮಂಗಳೂರು ಉಳ್ಳಾಲದ ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ಮಧುರೈ ಬಳಿ ಬಂಧಿಸಿದ್ದು, ದರೋಡೆಕೋರರನ್ನು ಮುಂಬೈನ ಧಾರಾವಿ ಮೂಲದವರು ಎಂದು ಗುರುತಿಸಲಾಗಿದೆ.