ವಾಮಂಜೂರಿನಲ್ಲಿ ಪೌಷ್ಠಿಕ ಆಹಾರದ ಮಹತ್ವದ ಬಗ್ಗೆ ಕಾರ್ಯಾಗಾರ

ಮಂಗಳೂರು : ಧರ್ಮಜ್ಯೋತಿ ಸೇವಾ ಸಂಸ್ಥೆ, ವಾಮಂಜೂರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ, ಕೊಣಾಜೆ (MSW) ಇದರ ಜಂಟಿ ಆಶ್ರಯದಲ್ಲಿ ಜನವರಿ 23ರಂದು ಗುರುವಾರ ಶ್ರಮಿಕ ಸಂತ ಜೋಸೆಫ್ ಹಿರಿಯ ಪ್ರಾಥಮಿಕ ಶಾಲೆ ವಾಮಂಜೂರಿನಲ್ಲಿ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ನಡೆಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾದ್ಯಾಪಕರಾದ ಉಷಾರಾಣಿಯವರು ಚಟುವಟಿಕೆಗಳ ಮೂಲಕ ಪೌಷ್ಟಿಕತೆಯ ಮಹತ್ವದ ಬಗ್ಗೆ ವಿವರವಾಗಿ ಮಕ್ಕಳಿಗೆ ತಿಳಿಸಿದರು. ಧರ್ಮಜ್ಯೋತಿ ಸೇವಾ ಸಂಸ್ಥೆಯ ರೆನಿಟಾ ಲೂವಿಸ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಾಲೆಯ ಸಹಶಿಕ್ಷಕಿಯರಾದ ಭಗಿನಿ ಫಿಲೋಮಿನಾ ಚಾಕೊ (SRA) ರವರು ಉಪಸ್ಥಿತರಿದ್ದರು. ಶಾಲೆಯ 58 ಮಕ್ಕಳು ಹಾಗೂ ಓರ್ವ ಶಿಕ್ಷಕಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. MSW ವಿದ್ಯಾರ್ಥಿಗಳಾದ ಮೇಘನಾ ಕಾರ್ಯಕ್ರಮವನ್ನು ನಿರೂಪಿಸಿದರು. ರಕ್ಷಾ ಸ್ವಾಗತ ಹಾಗೂ ಆರ್. ಸೂರ್ಯರವರು ವಂದನಾರ್ಪಣೆಯನ್ನು ಮಾಡಿದರು.