ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ ಭೇಧಿಸಿದ ಮಂಗಳೂರು ಪೊಲೀಸ್ ಆಯುಕ್ತರು ಹಾಗೂ ತಂಡಕ್ಕೆ ಅಭಿನಂದನೆ

ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಗಳನ್ನು ಅತೀ ಶೀಘ್ರದಲ್ಲಿ ಬಂಧಿಸಿ ದರೋಡೆಗೈದ ಚಿನ್ನಾಭರಣ ಮತ್ತು ನಗದನ್ನು ವಶಪಡಿಸಿದ ಮಂಗಳೂರು ಪೊಲೀಸ್ ಆಯುಕ್ತರು ಆದ ಅನುಪಮ್ ಅಗರ್ವಾಲ್ ಹಾಗೂ ಅವರ ತಂಡಕ್ಕೆ ಬ್ಯಾಂಕಿನ ನಿಯೋಗ ಇಂದು ಜನವರಿ 25ರಂದು ಭೇಟಿ ನೀಡಿ ಅಭಿನಂದನೆ ಸಲ್ಲಿಸಿರುತ್ತೇವೆ. ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ಇವರೊಂದಿಗೆ ಉಪಸ್ಥಿತರಿದ್ದರು.