February 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶಿಕ್ಷಿತರ ಪ್ರದೇಶಗಳಲ್ಲಿ ಮತದಾನ ಕುಂಠಿತಕ್ಕೆ ಬುದ್ಧಿವಂತಿಕೆ ಕೊರತೆ ಕಾರಣ – ಜಿಲ್ಲಾ ನ್ಯಾಯಾಧೀಶರು

ಚುನಾವಣೆಗಳಲ್ಲಿ ಶಿಕ್ಷಿತರು ಮತ್ತು ಶ್ರೀಮಂತರ ಪ್ರದೇಶಗಳಲ್ಲಿಯೇ ಮತದಾನ ಕಡಿಮೆ ಪ್ರಮಾಣದಲ್ಲಿ ನಡೆಯುತ್ತಿರುವುದು ಅವರಲ್ಲಿ ಪ್ರಜ್ಞೆ ಮತ್ತು ಬುದ್ಧಿವಂತಿಕೆ ಕೊರತೆಯ ದ್ಯೋತಕವಾಗಿದೆ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಸ್ವಾಮಿ ಹೇಳಿದ್ದಾರೆ.

ಅವರು ಜನವರಿ 25ರಂದು ಶನಿವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಮತದಾನ ಮಾಡಲು ಚುನಾವಣಾ ಆಯೋಗವು ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿದ್ದರೂ ಮತದಾನ ಮಾಡಲು ಮುಂದೆ ಬಾರದಿರುವುದು ಸಂವಿಧಾನಕ್ಕೆ ಮಾಡುವ ಅಗೌರವವಾಗಿದೆ. ಬಡವರು ಮತ್ತು ಅಶಿಕ್ಷಿತರ ಪ್ರದೇಶಗಳಲ್ಲಿ ಮತದಾನ ಹೆಚ್ಚಿನ ಪ್ರಮಾಣ ನಡೆಯುತ್ತದೆ. ಆದರೆ, ಶಿಕ್ಷಿತರು ಮತ್ತು ಸಿರಿವಂತರ ಪ್ರದೇಶಗಳಲ್ಲಿ ಅಂತಹ ಉತ್ಸಾಹ ಇರುವುದಿಲ್ಲ. ಕೇವಲ ಶಿಕ್ಷಣ ಮಾತ್ರ ಇದ್ದರೆ ಸಾಲದು, ಪ್ರಜ್ಞೆ ಮತ್ತು ಬುದ್ಧಿವಂತಿಕೆ ಇರಬೇಕು ಎಂದು ನ್ಯಾಯಾಧೀಶರು ತಿಳಿಸಿದರು.

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸವ೯ರಿಗೂ ಸಮಾನ ಮತದಾನದ ಹಕ್ಕನ್ನು ನೀಡಿದ ಜಗತ್ತಿನ ಮೊದಲ ದೇಶ ಭಾರತ. ಪ್ರಜಾಪ್ರಭುತ್ವದ ಹಳೆಯ ದೇಶಗಳಲ್ಲಿ ಉಳ್ಳವರಿಗೆ ಮಾತ್ರ ಸೀಮಿತವಾಗಿದ್ದ ಮತದಾನದ ಹಕ್ಕು, ಜನಸಾಮಾನ್ಯರಿಗೆ ಸಿಗಲು ಅಲ್ಲಿ ಸಾಕಷ್ಟು ಹೋರಾಟಗಳು ನಡೆಯಬೇಕಾಯಿತು. ಆದರೆ ಭಾರತದಲ್ಲಿ ಸಂವಿಧಾನ ಜಾರಿಗೆ ಬಂದ ಆರಂಭದಲ್ಲಿಯೇ ಎಲ್ಲರಿಗೂ ಮತದಾನದ ಹಕ್ಕು ದೊರೆಯಿತು ಎಂದರು.

ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಲೋಕಸಭಾ ಚುನಾವಣೆ ಅಚ್ಚುಕಟ್ಟಾಗಿ ನಿವ೯ಹಿಸಲಾಗಿದೆ. ಮತದಾರರ ನೋಂದಣಿಗೆ ನಾಲ್ಕು ಅಹ೯ತಾ ದಿನಾಂಕ ನಿಗದಿಪಡಿಸಲಾಗಿದೆ. ಇದನ್ನು ಉಪಯೋಗಿಸಿ ಪ್ರತಿಯೊಬ್ಬರು ನೋಂದಣಿ ಮಾಡಬೇಕು ಎಂದರು.  ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾಯ೯ನಿವ೯ಹಣಾಧಿಕಾರಿ ಡಾ. ಆನಂದ್ ಅವರು ಮತದಾರರ ಪ್ರತಿಜ್ಞಾವಿಧಿ ಬೋಧಿಸಿದರು. ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ,‌ ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಚುನಾವಣಾ ತಹಶೀಲ್ದಾರ್ ದಯಾನಂದ ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಸ್ವಾಗತಿಸಿದರು. ಮಂಜುಳಾ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಹೊಸದಾಗಿ ಮತದಾರರ ಪಟ್ಟಿಗೆ ನೋಂದಾಯಿಸಿದವರಿಗೆ ಗುರುತಿನ ಚೀಟಿಯನ್ನು ವಿತರಿಸಲಾಯಿತು. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

You may also like

News

ಅರಮಲೆಬೆಟ್ಟ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಮತ್ತು ಜಾತ್ರಾ ಮಹೋತ್ಸವ

ಬೆಳ್ತಂಗಡಿ : ಅರಮಲೆಬೆಟ್ಟ  ಕೊಡಮಣಿತ್ತಾಯ ಕ್ಷೇತ್ರದಲ್ಲಿ ಅದ್ಭುತ ಕೆಲಸವಾಗಿದ್ದು, ಉತ್ತಮ ವ್ಯವಸ್ಥೆಯನ್ನು ಭಕ್ತರ ಸಹಕಾರದಲ್ಲಿ ಆಡಳಿತ ಮಂಡಳಿ ಮಾಡಿದೆ. ಬಹಳಷ್ಟು ಕಾಮಗಾರಿ ನಡೆದಿದ್ದು ಕೊಡಮಣಿತ್ತಾಯ ದೈವದ ಸಂಪೂರ್ಣ
News

ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2025

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆ ಇಲ್ಲಿ ಇದೇ ಮೊದಲ ಬಾರಿಗೆ ಮಕ್ಕಳ ಸೃಜನಶೀಲತೆ ಪ್ರತಿಭೆ ಹಾಗೂ ಕಲಾ ಸಾಮರ್ಥ್ಯವನ್ನು ಪ್ರದರ್ಶಿಸಲು ಫೆಬ್ರವರಿ 10ರಂದು ಕಲಾ ಹಬ್ಬವನ್ನು

You cannot copy content of this page